ನವದೆಹಲಿ : 71ನೇ ಸಾಲಿನ ರಾಷ್ಟ್ರ ಪ್ರಶಸ್ತಿ ಪ್ರದಾನ ಸಮಾರಂಭವು ದೆಹಲಿಯ ವಿಜ್ಞಾನ್ ಭವನ್ನಲ್ಲಿ ಸೆಪ್ಟೆಂಬರ್ 23 ನಡೆಯಿತ್ತು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅವಾರ್ಡ್ನ ನೀಡಲಿದ್ದಾರೆ. ಶಾರುಖ್ ಖಾನ್ ಅವರು ಇದೇ ಮೊದಲ ಬಾರಿಗೆ ರಾಷ್ಟ್ರ ಪ್ರಶಸ್ತಿ ಪಡೆಯಲಿದ್ದಾರೆ. ಅನೇಕ ಸೆಲೆಬ್ರಿಟಿಗಳು ಕಾರ್ಯಕ್ರಮದಲ್ಲಿ ಭಾಗಿ ಆಗಲಿದ್ದಾರೆ.

ಶಾರುಖ್ ಖಾನ್, ರಾಣಿ ಮುಖರ್ಜಿ, ಮತ್ತು ವಿಕ್ರಾಂತ್ ಮಾಸಿ ಅವರಿಗೆ ಅತ್ಯುತ್ತಮ ನಟ/ನಟಿ ಪ್ರಶಸ್ತಿ ನೀಡಲಾಗುತ್ತದೆ. ಮೋಹನ್ ಲಾಲ್ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಲಾಗುತ್ತಿದೆ.

71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಮಲಯಾಳಂ ಖ್ಯಾತ ನಟ ಮೋಹನ್ ಲಾಲ್ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಮಲಯಾಳಂ ಖ್ಯಾತ ನಟ ಮೋಹನ್‌ಲಾಲ್ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಿ, ಗೌರವಿಸಿದರು.
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅವರು, ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ತೆಗೆದುಕೊಂಡ ನನಗೆ ಜವಾಬ್ದಾರಿ ಹೆಚ್ಚಾಗಿದೆ. ಈ ಪ್ರಶಸ್ತಿಯನ್ನು ಮಲಯಾಳಂ ಚಿತ್ರರಂಗಕ್ಕೆ ಅರ್ಪಿಸುತ್ತೇನೆ ಎಂದು ತಿಳಿಸಿದರು.

ಇದೇ ವೇಳೆ ಜವಾನ್ ಸಿನಿಮಾದ ನಟನೆಗಾಗಿ ಶಾರುಖ್ ಖಾನ್ ಹಾಗೂ 12th ಫೇಲ್ ಸಿನಿಮಾದ ನಟನೆಗಾಗಿ ವಿಕ್ರಾಂತ್ ಮ್ಯಾಸ್ಸೆ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಮಿಸಸ್ ಚಟರ್ಜಿ ವರ್ಸಸ್ ನಾರ್ವೆ ಚಿತ್ರದ ನಟನೆಗಾಗಿ ರಾಣಿ ಮುಖರ್ಜಿ ಅತ್ಯುತ್ತಮ ನಟಿ ಪ್ರಶಸ್ತಿ ಸ್ವೀಕರಿಸಿದರು. ಕನ್ನಡದ ಕಂದೀಲು ಚಿತ್ರಕ್ಕೆ ಅತ್ಯುತ್ತಮ ಪ್ರಾದೇಶಿಕ ಕನ್ನಡ ಚಿತ್ರ ಪ್ರಶಸ್ತಿ ಪ್ರದಾನ ಮಾಡಲಾಯಿತು.















