ಮನೆ ರಾಜ್ಯ ರಾಜ್ಯದಲ್ಲಿ 738 ಮಂದಿಗೆ ಕೋವಿಡ್ ಪಾಸಿಟಿವ್

ರಾಜ್ಯದಲ್ಲಿ 738 ಮಂದಿಗೆ ಕೋವಿಡ್ ಪಾಸಿಟಿವ್

0

ಬೆಂಗಳೂರು (Bengaluru): ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 738 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,61,361ಕ್ಕೆ ಏರಿಕೆಯಾಗಿದೆ.

ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇದರೊಂದಿಗೆ ಸಾವಿನ ಸಂಖ್ಯೆ 40,071 ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

646 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,16,966ಕ್ಕೆ ಏರಿಕೆಯಾಗಿದೆ. ಇನ್ನು 5,020 ಸಕ್ರಿಯ ಪ್ರಕರಣಗಳಿವೆ.

ಬೆಂಗಳೂರಿನಲ್ಲಿ ಇಂದು 698 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 17,97,234ಕ್ಕೆ ಏರಿಕೆಯಾಗಿದೆ.

ಹಿಂದಿನ ಲೇಖನಶಿವಸೇನಾ ಬಂಡಾಯ ನಾಯಕ ಏಕನಾಥ್‌ ಶಿಂಧೆಯನ್ನು ಭೇಟಿಯಾದ ಠಾಕ್ರೆ ಆಪ್ತರು
ಮುಂದಿನ ಲೇಖನಜೂನ್‌ 22 ರ ರಾಶಿ ಭವಿಷ್ಯ