ಯಾದಗಿರಿ ಜಿಲ್ಲೆ : ಶಹಾಪುರ ತಾಲ್ಲೂಕಿನ ಹೊತಪೇಟ ಗ್ರಾಮದ ಬಳಿ ಇರುವ ನವೋದಯ ಮಹಾ ವಿದ್ಯಾಲಯದ ವಿದ್ಯಾರ್ಥಿಗಳು, ಸಿಬ್ಬಂದಿ ಸೇರಿ 75 ಜನರಿಗೆ ಗುರುವಾರ ಕೋವಿಡ್ ದೃಢಪಟ್ಟಿದೆ.
‘ಶೀತಗಾಳಿಯ ಪರಿಣಾಮ ಆರೋಗ್ಯದಲ್ಲಿ ಏರುಪೇರಾಗಿದ್ದು, ನೆಗಡಿ, ಕೆಮ್ಮು, ಜ್ವರ ಕಾಣಿಸಿಕೊಂಡಿವೆ. ಪರೀಕ್ಷೆ ಮಾಡಿಸಿದಾಗ ಕೋವಿಡ್ ದೃಢಪಟ್ಟಿದೆ.
Advertisement

ಇದನ್ನೂ ಒದಿ ಕೊರೋನಾ: ದೇಶದಲ್ಲಿಂದು 2.86 ಲಕ್ಷ ಹೊಸ ಕೇಸ್ ಪತ್ತೆ
ವಿದ್ಯಾಲಯದ 363 ಮಕ್ಕಳಿಗೆ ತಪಾಸಣೆ ಮಾಡಲಾಗಿದೆ. ಮಕ್ಕಳಿಗೆ ಪ್ರತ್ಯೇಕ ವಾಸ ಮಾಡಲು ವ್ಯವಸ್ಥೆ ಮಾಡಲಾಗಿದೆ. ಪಾಲಕರು ಮಕ್ಕಳನ್ನು ಮನೆಗೆ ಕರೆದುಕೊಂಡು ಹೋಗುತ್ತಿದ್ದಾರೆ’ ಎಂದು ವೈದ್ಯೆ ಡಾ.ಕಾವ್ಯಾಶ್ರೀ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್, ನವೋದಯ ಮಹಾ ವಿದ್ಯಾಲಯಕ್ಕೆ ಭೇಟಿ ನೀಡಿ ಮಾಹಿತಿ ಪಡೆದಿದ್ದು, ಮಕ್ಕಳಿಗೆ ಸೂಕ್ತ ವ್ಯವಸ್ಥೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.