ನವದೆಹಲಿ: ಕಳೆದ 24 ಗಂಟೆಗಳಲ್ಲಿ 7,633 ಕೋವಿಡ್ ಪ್ರಕರಣಗಳೂ ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 61,233ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ.
11 ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 5,31,152ಕ್ಕೆ ತಲುಪಿದೆ. ದೆಹಲಿಯಲ್ಲಿ ಐದು ಮಂದಿ ಮೃತಪಟ್ಟಿದ್ದರೆ, ನಾಲ್ವರು ಕೇರಳದಲ್ಲಿ ಸಾವಿಗೀಡಾಗಿದ್ದಾರೆ. ಹರಿಯಾಣ, ಕರ್ನಾಟಕ ಮತ್ತು ಪಂಜಾಬ್ ನಲ್ಲಿ ತಲಾ ಒಂದೊಂದು ಸಾವಿನ ಪ್ರಕರಣಗಳು ವರದಿಯಾಗಿವೆ.
ದೇಶದಲ್ಲಿ ಈವರೆಗೆ ಒಟ್ಟು 4,48,34,859 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಪೈಕಿ ಶೇ 98.68 ರಷ್ಟು ಅಂದರೆ 4,42,42,474 ಮಂದಿ ಚೇತರಿಸಿಕೊಂಡಿದ್ದಾರೆ. ಸಾವಿನ ದರ ಶೇ 1.18 ರಷ್ಟಿದ್ದರೆ, ಸಕ್ರಿಯ ಪ್ರಕರಣಗಳ ಪ್ರಮಾಣ ಶೇ 0.14ರಷ್ಟಿದೆ.
ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ ಈವರೆಗೆ 220.66 ಕೋಟಿ ಡೋಸ್ ಲಸಿಕೆ ವಿತರಿಸಲಾಗಿದೆ.