ಮನೆ ಸ್ಥಳೀಯ ಅರ್ಥ ಪೂರ್ಣವಾಗಿ 78 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಆಚರಣೆ: ಡಾ. ಪಿ ಶಿವರಾಜು

ಅರ್ಥ ಪೂರ್ಣವಾಗಿ 78 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಆಚರಣೆ: ಡಾ. ಪಿ ಶಿವರಾಜು

0

    ಮೈಸೂರು: 78 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅಗಸ್ಟ್ 15 ರಂದು ಬೆಳಗ್ಗೆ 9 ಗಂಟೆಗೆ ಬನ್ನಿಮಂಟಪ ದಲ್ಲಿ ಅರ್ಥ ಪೂರ್ಣವಾಗಿ ಆಚರಿಸಲಾಗುವುದು ಅಪರ ಜಿಲ್ಲಾಧಿಕಾರಿಗಳಾದ ಡಾ. ಪಿ. ಶಿವರಾಜು ಅವರು ತಿಳಿಸಿದರು.

    Join Our Whatsapp Group

    ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸುವ ಸಂಬಂಧ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಅಂದು ಬೆಳಗ್ಗೆ 9 ಗಂಟೆಗೆ ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್ ಸಿ ಮಹದೇವಪ್ಪ ಅವರು ಧ್ವಜಾರೋಹಣ ನೆರವೇರಿಸುವರು. ಸಂಜೆ 5 ಗಂಟೆಗೆ ಕಲಾ ಮಂದಿರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತವೆ ಎಂದು ತಿಳಿಸಿದರು.

    ಸ್ವಾತಂತ್ರ್ಯ ದಿನಾಚರಣೆ ಆಚರಣೆಗೆ ಉಪಸಮಿತಿಗಳನ್ನು ರಚಿಸಲಾಗಿದೆ. ಪ್ರತಿಯೊಂದು ಸಮಿತಿಯಲ್ಲಿ ಇರುವ ಅಧಿಕಾರಿಗಳು ತಮ್ಮ ಸಮಿತಿಗೆ ನೀಡಿರುವ ಜವಾಬ್ದಾರಿಗಳನ್ನು ಸೂಕ್ತವಾಗಿ ನಿರ್ವಹಿಸಬೇಕು. ಪೆರೇಡ್ ಗೆ ಸಂಬಂಧಿಸಿದ ಜವಾಬ್ದಾರಿಯನ್ನು ಪೊಲೀಸ್ ಇಲಾಖೆ ನಿರ್ವಹಿಸಬೇಕು. ಪೆರೇಡ್ ನಲ್ಲಿ ಭಾಗವಹಿಸುವ ತಂಡಗಳು ಪೂರ್ವಭ್ಯಾಸ ಮಾಡಬೇಕು. ಮೊದಲ ರಿಹರ್ಸಲ್ ಆಗಸ್ಟ್ 12 ರಂದು ಹಾಗೂ ಎರಡನೇ ರಿಹರ್ಸಲ್ ಆಗಸ್ಟ್ 13 ರಂದು ಪೆರೇಡ್ ಮತ್ತು ಸಾಂಸ್ಕೃತಿಕ ತಂಡಗಳು ನಡೆಸುತ್ತವೆ. ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ದೇಶಭಕ್ತಿ ಗೀತೆಗಳು ಇರಬೇಕು ಎಂದು ಸೂಚನೆ ನೀಡಿದರು.

    ಶಿಷ್ಟಾಚಾರದ ಪ್ರಕಾರ ಆಹ್ವಾನ ಪತ್ರಿಕೆಗಳನ್ನು ಮುದ್ರಿಸಿ ವಿತರಣೆ ಮಾಡಬೇಕು. ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ ಸಿಹಿ ವಿತರಣೆ ಮಾಡಬೇಕು. ಕಾರ್ಯಕ್ರಮದಲ್ಲಿ ಭಾಗವಹಿಸಿ ಅತ್ತ್ಯುತ್ತಮ ಪ್ರದರ್ಶನ ನೀಡಿದ ತಂಡಗಳಿಗೆ ಬಹುಮಾನ ವಿತರಣೆ ಮಾಡಲಾಗುವುದು. ಪ್ಲಾಸ್ಟಿಕ್ ದ್ವಜ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಸರ್ಕಾರಿ ನೌಕರರು ದಿನಾಚರಣೆಯಲ್ಲಿ ಕಡ್ಡಾಯವಾಗಿ ಹಾಜರಾಗಬೇಕು ಎಂದು ಸೂಚನೆ ನೀಡಿದರು.

    ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಂಘ ಸಂಸ್ಥೆಗಳ ಮುಖಂಡರು ಉಪಸ್ಥಿತರಿದ್ದರು.