ಮನೆ ರಾಜ್ಯ 7ನೇ ವೇತನ ಆಯೋಗ: ರಾಜ್ಯ ಸರ್ಕಾರಿ ನೌಕರರಿಗೆ ಮಾರ್ಗಸೂಚಿ ಪ್ರಕಟ

7ನೇ ವೇತನ ಆಯೋಗ: ರಾಜ್ಯ ಸರ್ಕಾರಿ ನೌಕರರಿಗೆ ಮಾರ್ಗಸೂಚಿ ಪ್ರಕಟ

0

ಬೆಂಗಳೂರು: ರಾಜ್ಯ ಸರ್ಕಾರವು ಸರ್ಕಾರಿ ನೌಕರರ ಬೇಡಿಕೆಯಂತೆ ಮೂವರು ಸದಸ್ಯರ 7ನೇ ರಾಜ್ಯ ವೇತನ ಆಯೋಗವನ್ನು ರಚನೆ ಮಾಡಿದೆ.

ಆಯೋಗ ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳ ಪರಿಷ್ಕರಣೆ ಸಂಬಂಧ ಪ್ರಶ್ನಾವಳಿಗಳನ್ನು ಬಿಡುಗಡೆ ಮಾಡಿದೆ.

ಸರ್ಕಾರಿ ಆದೇಶದಲ್ಲಿ ರಾಜ್ಯ ಸರ್ಕಾರಿ ನೌಕರರ (ಯುಜಿಸಿ/ಎಐಸಿಟಿಇ/ಐಸಿಎಆರ್/ಎನ್’ಜೆಪಿಸಿ ವೇತನ ಶ್ರೇಣಿ ಹೊಂದಿರುವವರನ್ನು ಹೊರತುಪಡಿಸಿ) ಅನುದಾನಿತ ಶಿಕ್ಷಣ ಸಂಸ್ಥೆಗಳು. ಸ್ಥಳಳೀಯ ಸಂಸ್ಥೆಗಳು, ವಿಶ್ವವಿದ್ಯಾನಿಲಯಗಳು ಮತ್ತು ಕಾಲೇಜುಗಳ ಬೋಧಕೇತರ ಸಿಬ್ಬಂದಿಗಳ ವೇತನ ರಚನೆಯನ್ನು ಪರಿಶೀಲಿಸಿ, ವೇತನ ಮತ್ತು ಭತ್ಯೆಗಳ ಪರಿಷ್ಕರಣೆ ಸಂಬಂಧ ಸರ್ಕಾರಕ್ಕೆ ವರದಿ ಸಲ್ಲಿಸಲು 7ನೇ ರಾಜ್ಯ ವೇತನ ಆಯೋಗವನ್ನು ರಚಿಸಿ ಆದೇಶಗಳನ್ನು ಹೊರಡಿಸಲಾಗಿದೆ.

ವೇತನ ಆಯೋಗವು ತನ್ನ ಕಾರ್ಯಕಲಾಪಗಳನ್ನು ನಡೆಸಲು ಸರ್ಕಾರದ ವಿವಿಧ ಇಲಾಖೆಗಳು/ಸ್ಥಳೀಯ ಸಂಸ್ಥೆಗಳು/ನಿಗಮ/ಮಂಡಳಿಗಳು ಹಾಗೂ ರಾಜ್ಯ ಸರ್ಕಾರದ ಯಾವುದೇ ಅಂಗ ಸಂಸ್ಥೆಗಳು, ವಿಶ್ವವಿದ್ಯಾನಿಲಯಗಳು ಮತ್ತು  ಕಾಲೇಜುಗಳ ಬೋಧಕೇತರ ಸಿಬ್ಬಂದಿಗಳ ವೇತನ ರಚನೆಯನ್ನು ಪರಿಶೀಲಿಸಿ, ವೇತನ ಮತ್ತು ಭತ್ಯೆಗಳ ಪರಿಷ್ಕರಣೆ ಸಂಬಂಧ ಸರ್ಕಾರಕ್ಕೆ ವರದಿ ಸಲ್ಲಿಸಲು 7ನೇ ರಾಜ್ಯ ವೇತನ ಆಯೋಗವನ್ನು ರಚಿಸಿ ಆದೇಶಗಳನ್ನು ಹೊರಡಿಸಲಾಗಿದೆ.

ವೇತನ ಆಯೋಗವು ತನ್ನ ಕಾರ್ಯಕಲಾಪಗಳನ್ನು ನಡೆಸಲು ಸರ್ಕಾರದ ವಿವಿಧ ಇಲಾಖೆಗಳು, ಸ್ಥಳೀಯ ಸಂಸ್ಥೆಗಳು/ ನಿಗಮ/ ಮಂಡಳಿಗಳು ಹಾಗೂ ರಾಜ್ಯ ಸರ್ಕಾರದ ಯಾವುದೇ ಅಂಗ ಸಂಸ್ಥೆಗಳಿಂದ ಮಾಹಿತಿಗಳು ಮತ್ತು ದಸ್ತಾವೇಜುಗಳನ್ನು  ಪರಿಶೀಲಿಸುವ  ಅವಶ್ಯಕತೆ ಇರುತ್ತದೆ. ಪರಿಶೀಲನಾರ್ಹ ಅಂಶಗಳ ಕುರಿತಂತೆ ಆಯೋಗವು ಬಯಸುವ ವಿಷಯ ಮತ್ತು ಅಧಿಕೃತ ಮಾಹಿತಿಗಳ ಬಗ್ಗೆ ಸೂಕ್ತ ದಾಖಲೆ/ಮಾಹಿತಿಗಳನ್ನು ಪಡೆಯಲು ಆಯೋಗವು ಸರ್ಕಾರಿ ನೌಕರರು/ಪರಿಣಿತರು/ ಸಾರ್ವಜನಿಕರನ್ನು ಆಹ್ವಾನಿಸಿ ಅಧ್ಯಯನ ನಡೆಸಬೇಕಾಗಿರುತ್ತದೆ. ತನ್ನ ಕಾರ್ಯ ವ್ಯಾಪ್ತಿಯ ಪರಿಶೀಲನಾಂಶಗಳ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ/ಕಾರ್ಯದರ್ಶಿಗಳು, ಇಲಾಖಾ ಮುಖ್ಯಸ್ಥರು ಮತ್ತು ಸರ್ಕಾರದ ಇತರ ಅಧಿಕಾರಿಗಳ ಅಭಿಪ್ರಾಯಗಳನ್ನು ಸಹ ಆಯೋವು ಕೋರಬಹುದಾಗಿರುತ್ತದೆ.

ಆದ್ದರಿಂದ ಸರ್ಕಾರವು ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿ/ಕಾರ್ಯದರ್ಶಿಗಳು, ಇಲಾಖಾ ಮುಖ್ಯಸ್ಥರು ಆಯೋಗಕ್ಕೆ ಉತ್ತರಗಳನ್ನು ಸಲ್ಲಿಸುವ ಸಂಬಂಧದಲ್ಲಿ ಒಂದು ನಿರ್ಧಿಷ್ಟ ಕಾರ್ಯವಿಧಾನವನ್ನು ಅನುಸರಿಸುವಂತೆ ಸೂಚನೆಗಳನ್ನು ನೀಡುವುದು ಅಗತ್ಯವೆಂದು ಪರಿಗಣಿಸಿ ಮಾರ್ಗಸೂಚಿಗಳನ್ನು ಅನುಸರಿಸುವಂತೆ ಕೋರಲಾಗಿದೆ.