ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಐಟಿ-ಬಿ.ಟಿ ಸಚಿವ ಪ್ರಿಯಾಂಕ್ ಖರ್ಗೆ ಹೆಸರು ದುರ್ಬಳಕೆ ಮಾಡಿ ಕೊಂಡು ಹಣ ವಸೂಲಿ ಮಾಡಿದ್ದ ಆರೋಪದಡಿ ವ್ಯಕ್ತಿಯೊಬ್ಬರ ವಿರುದ್ಧ ವಿಧಾನ ಸೌಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಘುನಂದನ್ ಎಂಬಾ ತನ ವಿರುದ್ಧ ಪ್ರಕರಣ ದಾಖಲಾಗಿದೆ. ಸಚಿವರ ವಿಶೇಷ ಕರ್ತವ್ಯಾಧಿಕಾರಿ ನಾಗರಾಜ್ ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಆರೋಪಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.
ಚಳ್ಳಕೆರೆ ಉಪ ವಿಭಾಗದ ಪಂಚಾಯತ್ ರಾಜ್ ಇಲಾಖೆ ಎಂಜಿನಿಯರ್ ಎನ್.ಕಾವ್ಯಾ ಸ್ಥಳ ನಿರೀಕ್ಷಣೆಯಲ್ಲಿ ಇದ್ದರು.
ಈ ಮಾಹಿತಿ ತಿಳಿದು ಅ.14ರಂದು ಆರೋಪಿ ರಘುನಂದನ್ ಕರೆ ಮಾಡಿ, ಸಚಿವರ ಆಪ್ತ ಸಹಾಯಕ ಹಾಗೂ ವಿಶೇಷಾಧಿಕಾರಿ ಎಂದು ಕಾವ್ಯಾ ಬಳಿ ಪರಿಚಯಿಸಿಕೊಂಡಿದ್ದಾನೆ. ನಂತರ ಕಾವ್ಯಾ ಅವರ ವರ್ಗಾವಣೆಗೆ ಸಂಬಂಧಿಸಿದಂತೆ 2 ಲಕ್ಷ ರೂ.ಗೆ ಬೇಡಿಕೆ ಇಟ್ಟಿದಲ್ಲದೆ, ಬೆದರಿಸಿ ಫೋನ್ ಪೇ ಮೂಲಕ 80 ಸಾವಿರ ರೂ. ಸುಲಿಗೆ ಮಾಡಿದ್ದಾನೆ. ಆತನ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ನಾಗರಾಜ್ ದೂರಿನಲ್ಲಿ ಕೋರಿದ್ದಾರೆ ಎಂದು ಪೊಲೀಸರು ಹೇಳಿದರು.