ಮನೆ ರಾಜ್ಯ ಎಸ್‌ ಸಿ, ಎಸ್‌ ಟಿ ಕುಟುಂಬಗಳಿಗೆ ಉಚಿತ ವಿದ್ಯುತ್ ಗಾಗಿ 800 ಕೋಟಿ ರೂ. ಬಿಡುಗಡೆ:...

ಎಸ್‌ ಸಿ, ಎಸ್‌ ಟಿ ಕುಟುಂಬಗಳಿಗೆ ಉಚಿತ ವಿದ್ಯುತ್ ಗಾಗಿ 800 ಕೋಟಿ ರೂ. ಬಿಡುಗಡೆ: ಕೋಟ ಶ್ರೀನಿವಾಸ ಪೂಜಾರಿ

0

ಹಾವೇರಿ (Haveri): ರಾಜ್ಯದ 24 ಲಕ್ಷ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ಈ ತಿಂಗಳಿನಿಂದ ಪ್ರತಿ ಕುಟುಂಬ 75 ಯುನಿಟ್ ಉಚಿತ ವಿದ್ಯುತ್ ನೀಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ರಟ್ಟಿಹಳ್ಳಿ ತಾಲ್ಲೂಕು ಕುಡಪಲಿ ಗ್ರಾಮದಲ್ಲಿ 25 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಇಂದಿರಾಗಾಂಧಿ ವಸತಿ ಶಾಲೆಯ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಉಚಿತ ವಿದ್ಯುತ್‌ ನೀಡುವ ಉದ್ದೇಶಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 800 ಕೋಟಿ ರೂ. ಬಿಡುಗಡೆ ಮಾಡಿದ್ದಾರೆ ಎಂದರು.

ಹಿರೇಕೆರೂರು ತಾಲ್ಲೂಕಿನ ಕುಡುಪಲಿ, ದೂದಿಹಳ್ಳಿ, ಚಿಕ್ಕೇರೂರು ಮೂರು ವಸತಿ ಶಾಲೆಗಳಲ್ಲಿ ಪದವಿ ಪೂರ್ವ ಕಾಲೇಜು ಆರಂಭಿಸಲು ಮಂಜೂರಾತಿ ನೀಡಲಾಗುವುದು. ತಾಲ್ಲೂಕಿನಲ್ಲಿ ಬೇಡಿಕೆ ಇರುವ ಡಾ.ಬಿ.ಆರ್.ಅಂಬೇಡ್ಕರ್‌ ಸಮುದಾಯ ಭವನಗಳಿಗೆ ಹಾಗೂ ರಟ್ಟೀಹಳ್ಳಿ ಹಡಪದ ಸಮುದಾಯ ಭವನ ನಿರ್ಮಾಣಕ್ಕೆ ಮಂಜೂರಾತಿ ನೀಡಲಾಗುವುದು ಎಂದು ಭರವಸೆ ನೀಡಿದರು.

ರಾಜ್ಯ ಸರ್ಕಾರ ಬಡವರ ಮಕ್ಕಳ ವಿದ್ಯಾಭ್ಯಾಸಕ್ಕೆ ಆದ್ಯತೆ ನೀಡಲಾಗಿದ್ದು, ಬಡವರ ಮಕ್ಕಳಿಗಾಗಿ ಗುಣಮಟ್ಟದ ಶಿಕ್ಷಣ, ಉನ್ನತ ಸೌಭ್ಯಗಳನ್ನು ಒಳಗೊಂಡ 830 ವಸತಿ ಶಾಲೆಗಳು ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿವೆ. ವಸತಿ ಶಾಲೆಗಳಿಗೆ 250 ಕೋಟಿಯನ್ನು ವಸತಿಶಾಲೆಗಳಿಗೆ ಮಂಜೂರು ಮಾಡಿದ್ದಾರೆ ಎಂದರು.

ವಸತಿ ಶಾಲೆಗಳಿಗೆ ಬರುವ ವಿದ್ಯಾರ್ಥಿಗಳ ಹೆಚ್ಚಾಗಿರುವುದರಿಂದ ಬರುವ ಆರ್ಥಿಕ ವರ್ಷದಲ್ಲಿ 6ನೇ ತರಗತಿಗೆ ಎ ಮತ್ತು ಬಿ ಸೆಕ್ಷನ್‌ಗಳನ್ನು ಆರಂಭಿಸಿ 27 ಸಾವಿರ ಮಕ್ಕಳಿಗೆ ಅವಕಾಶ ಕಲ್ಪಿಸಲಾಗುವುದು. ಈ ಉದ್ದೇಶಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದಲ್ಲಿ 2,400 ವಿದ್ಯಾರ್ಥಿನಿಲಯಗಳಿದ್ದು, 20 ಲಕ್ಷ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡಿದ್ದಾರೆ ಎಂದರು.

ಹಿಂದಿನ ಲೇಖನವಿಶ್ವ ಬ್ಯಾಡ್ಮಿಂಟನ್‌ ಚಾಂಪಿಯನ್‌ಷಿಪ್‌: ಪ್ರೀಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ ಸೈನಾ ನೆಹ್ವಾಲ್‌
ಮುಂದಿನ ಲೇಖನಬ್ರಹ್ಮೋಸ್ ಕ್ಷಿಪಣಿ ಆಕಸ್ಮಿಕ ಉಡಾವಣೆ: ಮೂವರು ವಾಯುಪಡೆ ಅಧಿಕಾರಿಗಳ ವಜಾ