ಮನೆ ಉದ್ಯೋಗ 835 ಹೆಡ್​ಕಾನ್ಸ್​ಟೇಬಲ್​ ಹುದ್ದೆಗೆ ಅರ್ಜಿ ಆಹ್ವಾನ

835 ಹೆಡ್​ಕಾನ್ಸ್​ಟೇಬಲ್​ ಹುದ್ದೆಗೆ ಅರ್ಜಿ ಆಹ್ವಾನ

0

ಕಾನ್ಸ್‌ಟೇಬಲ್ (ಸಚಿವಾಲಯ) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 835 ಹುದ್ದೆಗಳಿಗೆ ನೇಮಕಾತಿ ನಡೆಸಲಿದೆ. ಇದರಲ್ಲಿ 559 ಹುದ್ದೆಗಳು ಪುರುಷರಿಗೆ ಮೀಸಲಾಗಿದ್ದು, 276 ಹುದ್ದೆಗಳು ಮಹಿಳೆಯರಿಗೆ ಮೀಸಲಾಗಿದೆ. ಈಗಾಗಲೇ ಹುದ್ದೆ ನೇಮಕಾತಿ ಅಧಿಸೂಚನೆ ಹೊರ ಬಿದಿದ್ದು, ಅರ್ಜಿ ಸಲ್ಲಿಸಲು ಜೂನ್​ 16 ಕಡೆಯ ದಿನವಾಗಿದೆ.

ವಿದ್ಯಾರ್ಹತೆ: ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ 10+2 ಅಥವಾ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.
ಅಭ್ಯರ್ಥಿಯು ಇಂಗ್ಲಿಷ್​​ ಮತ್ತು ಹಿಂದಿ ಟೈಪಿಂಗ್​ ಅನುಭವ ಹೊಂದಿರಬೇಕು. ಪ್ರತಿ ನಿಮಿಷಕ್ಕೆ 30 ಪದ ಇಂಗ್ಲಿಷ್​ ಹಾಗೂ ಪ್ರತಿ ನಿಮಿಷಕ್ಕೆ 25 ಪದ ಕನ್ನಡವನ್ನು ಟೈಪ್​ ಮಾಡಬೇಕು.
ವಯೋಮಿತಿ : ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಆಗಿದ್ದು, ಗರಿಷ್ಠ 25 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ
ಹಿಂದುಳಿದ ಅಭ್ಯರ್ಥಿಗಳಿಗೆ 3 ವರ್ಷ
ವಿಕಲಚೇತನ ಅಭ್ಯರ್ಥಿಗೆ (ಮೀಸಲಾತಿ ರಹಿತ) : 10 ವರ್ಷ

ವಿಕಲಚೇತನ ಅಭ್ಯರ್ಥಿಗೆ (ಪ. ಜಾತಿ, ಪ. ಪಂ ) 15 ವರ್ಷ
ವಿಕಲಚೇತನ ಅಭ್ಯರ್ಥಿಗೆ (ಹಿಂದುಳಿದ ವರ್ಗ) 13 ವರ್ಷ

ಅರ್ಜಿ ಶುಲ್ಕ
ಸಾಮಾನ್ಯ, ಹಿಂದುಳಿದ ಅಭ್ಯರ್ಥಿಗಳಿಗೆ 100 ರೂ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಶುಲ್ಕದ ವಿನಾಯಿತಿ.

ಪ್ರಮುಖ ದಿನಾಂಕ
ಅರ್ಜಿ ಸಲ್ಲಿಕೆ ಆರಂಭ : ಮೇ 17, 2022
ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜೂನ್​ 16, 2022
ಅರ್ಜಿ ಶುಲ್ಕ ಕಟ್ಟಲು ಕಡೆಯ ದಿನಾಂಕ: ಜೂನ್​ 16, 2022
ಆಫ್​ಲೈನ್ ಶುಲ್ಕ ಕಟ್ಟಲು ಕಡೆಯ ದಿನಾಂಕ: ಜೂನ್​ 20, 2022

ಅಧಿಕೃತ ವೆಬ್​ಸೈಟ್: ssc.nic.in

ಅರ್ಜಿ ಸಲ್ಲಿಕೆ ಪ್ರಕ್ರಿಯೆ
ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ
ಆನ್‌ಲೈನ್ ಮೋಡ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
ವಿಜ್ಞಾನಿ ಹುದ್ದೆಗೆ ಅರ್ಜಿ ಸಲ್ಲಿಕೆ ಲಿಂಕ್​ ಅನ್ನು ಕ್ಲಿಕ್​ ಮಾಡಿ ಆನ್‌ಲೈನ್‌ನಲ್ಲಿ ಅನ್ವಯಿಸಿ
ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ.

ನಿಮ್ಮ ಇತ್ತೀಚಿನ ಫೋಟೋಗ್ರಾಫ್ (ಅನ್ವಯಿಸಿದರೆ) ಜೊತೆಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.
ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.
ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸು ಬಟನ್ ಅನ್ನು ಕೊನೆಯದಾಗಿ ಕ್ಲಿಕ್ ಮಾಡಿ.