ಮನೆ ರಾಜ್ಯ ರಾಜ್ಯದಲ್ಲಿ 845 ಮಂದಿಗೆ ಕೋವಿಡ್ ಪಾಸಿಟಿವ್: 5 ಸಾವು

ರಾಜ್ಯದಲ್ಲಿ 845 ಮಂದಿಗೆ ಕೋವಿಡ್ ಪಾಸಿಟಿವ್: 5 ಸಾವು

0

ಬೆಂಗಳೂರು (Bengaluru): ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 845 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,50,915ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಸೋಂಕಿನಿಂದ ಐವರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 40199ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯದಲ್ಲಿ 1389 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 4003899ಕ್ಕೆ ಏರಿಕೆಯಾಗಿದೆ. ಇನ್ನು 6775 ಸಕ್ರಿಯ ಪ್ರಕರಣಗಳಿವೆ.

ಬೆಂಗಳೂರಿನಲ್ಲಿ 589 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 1864249ಕ್ಕೆ ಏರಿಕೆಯಾಗಿದೆ.

ಹಿಂದಿನ ಲೇಖನಗಣೇಶ ಚರ್ತುರ್ಥಿ: ಪ್ರತಿಷ್ಠಾಪನೆ, ಪೂಜೆ ವಿಧಾನ ಇಲ್ಲಿದೆ ಮಾಹಿತಿ
ಮುಂದಿನ ಲೇಖನಟೆನ್ಷನ್‌ ಕಂಟ್ರೋಲ್‌ ಮಾಡಲು ಈ ಯೋಗಾಸನಗಳು ಸಹಕಾರಿ