ಮನೆ ರಾಜ್ಯ ರಾಜ್ಯದಲ್ಲಿ 85 ಮಂದಿಗೆ ಕೊರೊನಾ ಪಾಸಿಟಿವ್‌

ರಾಜ್ಯದಲ್ಲಿ 85 ಮಂದಿಗೆ ಕೊರೊನಾ ಪಾಸಿಟಿವ್‌

0

ಬೆಂಗಳೂರು (Benagaluru)-ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 85 ಹೊಸ ಕೊರೊನಾ (Corona) ಸೋಂಕಿನ ಪ್ರಕರಣಗಳು ವರದಿಯಾಗಿವೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 39,47,083ಕ್ಕೆ ಏರಿಕೆಯಾಗಿದೆ. 70 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,05298ಕ್ಕೆ ಏರಿಕೆಯಾಗಿದೆ. ಇನ್ನು 1686 ಸಕ್ರಿಯ ಪ್ರಕರಣಗಳಿವೆ.

ಇಂದು ಯಾವುದೇ ಸಾವು ವರದಿಯಾಗಿಲ್ಲ. ಕೊರೊನಾದಿಂದ ಇದುವರೆಗೂ 40057 ಮಂದಿ ಮೃತಪಟ್ಟಿದ್ದಾರೆ. ಇಂದು 7171 ಮಂದಿ ಪರೀಕ್ಷೆಗೆ ಒಳಪಟ್ಟಿದ್ದು, ಇದುವರೆಗೂ 65829280 ಮಂದಿಯನ್ನು ಪರೀಕ್ಷಿಸಲಾಗಿದೆ. ಇನ್ನು ಸೋಂಕಿನ ಪ್ರಮಾಣ ಶೇ.1.18 ಇದೆ.

ಬೆಂಗಳೂರಿನಲ್ಲಿ ಇಂದು 82 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 17,82,081ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲೂ ಯಾವುದೇ ಕೊರೋನಾ ಸಾವು ವರದಿಯಾಗಿಲ್ಲ.

ಹಿಂದಿನ ಲೇಖನಕೊರೊನಾ 4ನೇ ಅಲೆ ಭೀತಿ: ವಿಮಾನ ನಿಲ್ದಾಣ, ಗಡಿ ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ; ಸಿಎಂ ಬೊಮ್ಮಾಯಿ ಸುಳಿವು
ಮುಂದಿನ ಲೇಖನಜಿಗ್ನೇಶ್‌ ಮೇವಾನಿ 5 ದಿನ ಪೊಲೀಸ್‌ ಕಸ್ಟಡಿಗೆ