ಬೆಂಗಳೂರು (Bengaluru): ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 858 ಮಂದಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,63,633ಕ್ಕೆ ಏರಿಕೆಯಾಗಿದೆ.
ಕೋವಿಡ್ ಸೋಂಕಿಗೆ ಒಬ್ಬರು ಬಲಿಯಾಗಿದ್ದಾರೆ. ಇದರಿಂದ ಸಾವಿನ ಸಂಖ್ಯೆ 40,072 ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
682 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,18,452ಕ್ಕೆ ಏರಿಕೆಯಾಗಿದೆ. ಇನ್ನು 5,067 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ ಇಂದು 820 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 17,98,680ಕ್ಕೆ ಏರಿಕೆಯಾಗಿದೆ.