ಮನೆ ರಾಜ್ಯ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ:`ಕನ್ನಡ ರಥ’ಕ್ಕೆ ಚಾಲನೆ

86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ:`ಕನ್ನಡ ರಥ’ಕ್ಕೆ ಚಾಲನೆ

0

ಹಾವೇರಿ: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರದ ಅಂಗವಾಗಿ ರಾಜ್ಯಾದ್ಯಂತ ಸಂಚರಿಸಲಿರುವ ‘ಕನ್ನಡ ರಥ’ಕ್ಕೆ ತಾಲ್ಲೂಕಿನ ಗೊಟಗೋಡಿಯ ಜಾನಪದ ವಿಶ್ವವಿದ್ಯಾಲಯದ ಆವರಣದಲ್ಲಿ ಬುಧವಾರ ಅದ್ಧೂರಿಯಾಗಿ ಚಾಲನೆ ನೀಡಲಾಯಿತು.

‘ಕನ್ನಡ ರಥ’ಕ್ಕೆ ಡಿ.1ರಂದು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಭುವನಗಿರಿಯ ಭುವನೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ರಾಜ್ಯದ 31 ಜಿಲ್ಲೆಗಳಲ್ಲೂ ಸಂಚರಿಸಲಿದೆ.

ಭುವನೇಶ್ವರಿ ದೇಗುಲದಿಂದ ದೀಪ ತೆಗೆದುಕೊಂಡು ಕನ್ನಡ ರಥ ಹೊರಡಲಿದೆ. ಅದೇ ದೀಪದಿಂದ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟನೆ ಮಾಡಲಿರುವುದು ಈ ಬಾರಿಯ ವಿಶೇಷ’ ಎಂದು ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಲಿಂಗಯ್ಯ ಹಿರೇಮಠ ತಿಳಿಸಿದ್ದಾರೆ.

ಜನವರಿ 1ರಿಂದ 5ರವರೆಗೆ ಹಾವೇರಿ ಜಿಲ್ಲೆಯಾದ್ಯಂತ ಸಂಚರಿಸಿ, ಜ.6ರಂದು ಹಾವೇರಿ ನಗರದಲ್ಲಿ ನಡೆಯುವ ಸಾಹಿತ್ಯ ಸಮ್ಮೇಳನದ ಮೆರವಣಿಗೆಯಲ್ಲಿ ಕನ್ನಡ ರಥ ಸಾಗಲಿದೆ. ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ರಥವನ್ನು ಭವ್ಯವಾಗಿ ಸ್ವಾಗತಿಸಲು ಸೂಚಿಸಲಾಗಿದೆ.

ಚಾಲನೆ ನೀಡುವ ಸಂದರ್ಭದಲ್ಲಿ ಶಾಸಕ ನೆಹರು ಓಲೇಕಾರ, ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಟಿ.ಎಂ.ಭಾಸ್ಕರ್, ಸಿ.ಬಿ.ಯಲಿಗಾರ ಸೇವಾ ಸಂಸ್ಥೆ ಅಧ್ಯಕ್ಷ ಶಶಿಧರ ಯಲಿಗಾರ, ಹಾವೇರಿ ನಗರಸಭೆ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಇದ್ದರು.

ಹಿಂದಿನ ಲೇಖನಜಿಲ್ಲಾ ಮಟ್ಟದ ಸಂವಿಧಾನ ಅರಿವು ಸ್ಪರ್ಧೆ: ಬಹುಮಾನ ವಿತರಣೆ
ಮುಂದಿನ ಲೇಖನಶೇಷ ದೇವಾ ವಾರುಣಿ ಪತಿ ಪಾಹಿ