Saval TV on YouTube
ನವದೆಹಲಿ(Newdelhi): ಕೇಂದ್ರ ಸರ್ಕಾರಗಳ ವಿವಿಧ ಇಲಾಖೆಗಳಲ್ಲಿ ಸುಮಾರು 9.79 ಲಕ್ಷ ಹುದ್ದೆಗಳು ಖಾಲಿ ಇವೆ.
ಈ ಕುರಿತು ಬುಧವಾರ ಲೋಕಸಭೆಗೆ ಕೇಂದ್ರ ಸರ್ಕಾರದ ಸಿಬ್ಬಂದಿ ಸಚಿವಾಲಯದ ರಾಜ್ಯ ಖಾತೆ ಸಚಿವ ಜಿತೇಂದ್ರ ಸಿಂಗ್ ಮಾಹಿತಿ ನೀಡಿದ್ದಾರೆ.
ವೆಚ್ಚ ಇಲಾಖೆಯ ವಾರ್ಷಿಕ ವರದಿಯ ಪ್ರಕಾರ, 2021 ಮಾರ್ಚ್ 1ರಂತೆ ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು/ಇಲಾಖೆಗಳಲ್ಲಿ 9,79,327 ಹುದ್ದೆಗಳು ಖಾಲಿ ಇವೆ ಎಂದು ಸಚಿವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ಖಾಲಿ ಹುದ್ದೆಗಳನ್ನು ಸಕಾಲಕ್ಕೆ ಭರ್ತಿ ಮಾಡಲಾಗುತ್ತದೆ. ಈ ಸಂಬಂಧ ಇಲಾಖೆಗಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದರು.
ಮಗದೊಂದು ಪ್ರಶ್ನೆಗೆ ಉತ್ತರಿಸಿದ ಜಿತೇಂದ್ರ ಸಿಂಗ್, ಭಾರತೀಯ ಆಡಳಿತ ಸೇವೆಯಲ್ಲಿ (ಐಎಎಸ್) 1,472 ಹುದ್ದೆಗಳು ಖಾಲಿ ಇವೆ ಎಂದು ತಿಳಿಸಿದರು.