ಸೀಬರ್ಡ್ ಬಸ್ಸಿನಲ್ಲಿದ್ದ 8 ಪ್ರಯಾಣಿಕರು, ಲಾರಿ ಡ್ರೈವರ್ ಸೇರಿ 9 ಮಂದಿ ಸಾವು ಮೃತಪಟ್ಟಿದ್ದಾರೆ ಎಂದು ಐಜಿಪಿ ರವಿಕಾಂತೇಗೌಡ ತಿಳಿಸಿದ್ದಾರೆ. ಗೊರ್ಲತ್ತು ಗ್ರಾಮದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಬಸ್ಸಿನಿಂದ ಎಂಟು ಮೃತ ದೇಹಗಳನ್ನು ಹೊರತೆಗೆಯಲಾಗಿದೆ.
ಓರ್ವ ಲಾರಿ ಚಾಲಕ ಸೇರಿ ಸದ್ಯದ ಮಾಹಿತಿ ಪ್ರಕಾರ 9 ಜನ ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ಶಿರಾ ಹಾಗೂ ಹಿರಿಯೂರು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಅಂಬುಲೆನ್ಸ್ ಮೂಲಕ ಕಳುಹಿಸಿಕೊಡಲಾಗಿದೆ. ಬೆಂಗಳೂರಿನಿಂದ ಡಿಎನ್‌ಎ ಅಂಡ್ ಸುಕೋ ಟೀಂ ಬಂದಿದೆ ಎಂದು ಹೇಳಿದರು.
ಸೀಬರ್ಡ್ ಬಸ್ಸಿನಲ್ಲಿದ್ದ 21 ಜನರು ಪತ್ತೆಯಾಗಿದ್ದು 11 ಜನರು ಪತ್ತೆಯಾಗಿಲ್ಲ ಎಂದು ಚಿತ್ರದುರ್ಗ ಎಸ್‌ಪಿ ರಂಜಿತ್ ಹೇಳಿದ್ದಾರೆ. ಸೀಬರ್ಡ್ ಬಸ್ಸಿನಲ್ಲಿದ್ದ 21 ಜನರು ಪತ್ತೆ ಆಗಿದ್ದು ಆಸ್ಪತ್ರೆಗೆ ಶಿಫ್ಟ್ ಮಾಡಿದ್ದೇವೆ. ಈ ಪೈಕಿ ಆರು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ತಿಳಿಸಿದರು.
ಲಾರಿ ಚಾಲಕ ನಿದ್ದೆ ಮಂಪರಿನಲ್ಲಿ ಅಪಘಾತ ನಡೆದಿರುವ ಸಾಧ್ಯತೆಯಿದೆ. ಚಾಲಕ ನಿರ್ವಾಹಕ ಸೇರಿ ಸೀಬರ್ಡ್ ಬಸ್ಸಿನಲ್ಲಿ 32 ಜನ ಪ್ರಯಾಣಿಸುತ್ತಿದ್ದರು ಎಂದು ಮಾಹಿತಿ ನೀಡಿದರು.















