ಮನೆ ರಾಜ್ಯ ರಾಜ್ಯದಲ್ಲಿ 942 ಮಂದಿಗೆ ಕೋವಿಡ್‌ ಪಾಸಿಟಿವ್‌

ರಾಜ್ಯದಲ್ಲಿ 942 ಮಂದಿಗೆ ಕೋವಿಡ್‌ ಪಾಸಿಟಿವ್‌

0

ಬೆಂಗಳೂರು (Bengaluru): ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 942 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,79,021ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಸೋಂಕಿನಿಂದ ಯಾವುದೇ ಸಾವು ವರದಿಯಾಗಿಲ್ಲ. ಹೀಗಾಗಿ ಸಾವಿನ ಸಂಖ್ಯೆ 40081 ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

737 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,32,000ಕ್ಕೆ ಏರಿಕೆಯಾಗಿದೆ. ಇನ್ನು 6898 ಸಕ್ರಿಯ ಪ್ರಕರಣಗಳಿವೆ.

ಬೆಂಗಳೂರಿನಲ್ಲಿ 831 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,12,896ಕ್ಕೆ ಏರಿಕೆಯಾಗಿದೆ.

ಹಿಂದಿನ ಲೇಖನಶಿವ ತಾಂಡವ ಸ್ತೋತ್ರ ಪಠಿಸಿ ಆತನ ಕೃಪೆಗೆ ಪಾತ್ರರಾಗಿ
ಮುಂದಿನ ಲೇಖನಸ್ನಾಯುಗಳ ಬಲಪಡಿಸುವಿಕೆಗೆ ಈ 5 ವ್ಯಾಯಾಮಾ ಬೆಸ್ಟ್‌