ಬೆಂಗಳೂರು (Bengaluru): ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 944 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,86,320ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 40,089ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ರಾಜ್ಯದಲ್ಲಿ 670 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,38,620ಕ್ಕೆ ಏರಿಕೆಯಾಗಿದೆ. ಇನ್ನು 7,569 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ 799 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,19,445ಕ್ಕೆ ಏರಿಕೆಯಾಗಿದೆ.