ಬೆಂಗಳೂರು (Bengaluru)-ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 95 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,50,223ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಸೋಂಕಿನಿಂದ ಯಾವುದೇ ಸಾವು ವರದಿಯಾಗಿಲ್ಲ. ಹೀಗಾಗಿ ಸಾವಿನ ಸಂಖ್ಯೆ 40064 ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
155 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,08451ಕ್ಕೆ ಏರಿಕೆಯಾಗಿದೆ. ಇನ್ನು 1666 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ 89 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 17,85,955ಕ್ಕೆ ಏರಿಕೆಯಾಗಿದೆ.