ಬೆಂಗಳೂರು (Bengaluru): ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 968 ಮಂದಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,66,420ಕ್ಕೆ ಏರಿಕೆಯಾಗಿದೆ.
ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 40073ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
337 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,21,387ಕ್ಕೆ ಏರಿಕೆಯಾಗಿದೆ. ಇನ್ನು 4918 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ 887 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,01,302ಕ್ಕೆ ಏರಿಕೆಯಾಗಿದೆ.