ಬೆಂಗಳೂರು (Bengaluru)-ರಾಜ್ಯದಲ್ಲಿ ಕೊರೊನಾ (Corona) ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 98 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.
ಇದರೊಂದಿಗೆ ಸೋಂಕಿತರ ಸಂಖ್ಯೆ 39,49,773ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ ಇಂದು ಯಾವುದೇ ಸಾವು ವರದಿಯಾಗಿಲ್ಲ. ಹೀಗಾಗಿ ಸಾವಿನ ಸಂಖ್ಯೆ 40063 ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
149 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,07828ಕ್ಕೆ ಏರಿಕೆಯಾಗಿದೆ. ಇನ್ನು 1840 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ ಇಂದು 89 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 17,85,543ಕ್ಕೆ ಏರಿಕೆಯಾಗಿದೆ.