ಶ್ರೀರಂಗಪಟ್ಟಣ: ಸಚಿವ ಜಮೀರ್ ಅಹ್ಮದ್ ಅವರು ಕೇಂದ್ರ ಸಚಿವ ಹೆಚ್ ಡಿ. ಕುಮಾರಸ್ವಾಮಿ ಅವರನ್ನು ಕ್ಷಮೆ ಕೇಳಿಬೇಕೆಂದು ಒತ್ತಾಯಿಸಿ ಪಟ್ಟಣದ ಪುರಸಭಾ ಸದಸ್ಯರು ಒತ್ತಾಯಿಸಿದರು.
ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಪರ ಪ್ರಚಾರದ ವೇಳೆ ವಸತಿ ಹಾಗೂ ವಕ್ಫ್ ಸಚಿವ ಬಿ. ಝಡ್. ಜಮೀರ್ ಅಹ್ಮದ್ ಖಾನ್ ಭಾಷಣದ ಮಧ್ಯೆ “ಕರಿಯ ಕುಮಾರಸ್ವಾಮಿ” ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ನೀಡಿದ್ದ ಅವಹೇಳನಕಾರಿ ಹೇಳಿಕೆಗೆ ಕಿಡಿಕಾರಿದರು.
ಶ್ರೀರಂಗಪಟ್ಟಣ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಅವರನ್ನು ಖರೀದಿ ಮಾಡುತ್ತೇನೆ ಎಂದು ಜಮೀರ್ ಅಹ್ಮದ್ ಹೇಳಿದ್ದು, ಕುಮಾರಸ್ವಾಮಿ ಅವರ ಚಪ್ಪಲಿಯನ್ನು ಇವರು ಖರೀದಿಸಲು ಸಾಧ್ಯವಿಲ್ಲ ಎಂದು ಹರಿಹಾಯ್ದರು.
ಹೆಚ್ ಡಿ ದೇವೇಗೌಡರ ಫೋಟೋವನ್ನು ಬಳಸಿಕೊಂಡು ಗೆದ್ದು ಬಂದವರು ಇಂದು ಅವರನ್ನೇ ವಿರೋಧಿಸುತ್ತಿದ್ದಾರೆ. ಮೂಲ ಕಾಂಗ್ರೆಸ್ಸಿಗರು ದೇವೆಗೌಡರನ್ನು ವಿರೋಧಿಸುತ್ತಿಲ್ಲ. ಆದರೆ ಕರ್ನಾಟಕದ ಜನ ದೇವೇಗೌಡರು, ಕುಮಾರಸ್ವಾಮಿ ಅವರನ್ನು ಬಿಟ್ಟುಕೊಡುವುದಿಲ್ಲ ಎಂದು ಹೇಳಿದರು.
ಕೊರೊನಾಗಿಂತ ಮಹಾಮಾರಿ ವಕ್ಫ್ ಬೋರ್ಡ್. ರಾಜ್ಯವನ್ನು ನುಂಗಿ ನೀರು ಕುಡಿಯಲು ನಿಂತಿದ್ದಾರೆ. ವಕ್ಫ್ ಬೋರ್ಡ್ ಆಸ್ತಿಯನ್ನು ರದ್ದುಗೊಳಿಸಬೇಕು. ರೈತರ ಜಮೀನನ್ನು ವಾಪಾಸ್ ಕೊಡಬೇಕು. ಅವರ ಹೆಸರಿಗೆ ಖಾತೆ ಮಾಡಿಕೊಟ್ಟು, ನೆಮ್ಮದಿಯಾಗಿ ಜೀವನ ನಡೆಸಲು ಅವಕಾಶ ಮಾಡಿಕೊಡಬೇಕು. ಇಲ್ಲವಾದರೆ ಕಾವೇರಿ ಚಳವಳಿ ಮಾದರಿ ಸಮಿತಿ ಮಾಡಿಕೊಂಡು ವಕ್ಫ್ ಬೋರ್ಡ್ ಹಾಗೂ ಜಮೀರ್ ಅಹ್ಮದ್ ವಿರುದ್ಧ ದೊಡ್ಡ ಮಟ್ಟದ ಚಳವಳಿ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಪುರಸಭೆ ಸದಸ್ಯರಾದದ ಪ್ರಕಾಶ್, ಗಂಜಾಂ ಶಿವಣ್ಣ, ಕೃಷ್ಣಪ್ಪ ಹಾಗೂ ಮತ್ತಿತರರು ಪಾಲ್ಗೊಂಡಿದ್ದರು.