ಮನೆ ಅಪರಾಧ ಸಾಹಿತಿ ಚಂದ್ರಶೇಖರ ಕಂಬಾರ ಹೆಸರಿನಲ್ಲಿ ವಂಚನೆಗೆ ಯತ್ನ: ದೂರು ದಾಖಲು

ಸಾಹಿತಿ ಚಂದ್ರಶೇಖರ ಕಂಬಾರ ಹೆಸರಿನಲ್ಲಿ ವಂಚನೆಗೆ ಯತ್ನ: ದೂರು ದಾಖಲು

0

ಬೆಂಗಳೂರು(Bengaluru):  ಜ್ಞಾನಪೀಠ ಪ್ರಶಸ್ತಿ ವಿಜೇತ ಸಾಹಿತಿ ಚಂದ್ರಶೇಖರ ಕಂಬಾರರ ಹೆಸರಿನಲ್ಲಿ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸಹಾಯಕ್ಕಾಗಿ ಮನವಿ ಮಾಡುತ್ತಿದ್ದು, ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಕವಿ ಚಂದ್ರಶೇಖರ ಕಂಬಾರರು ಬೆಂಗಳೂರು ದಕ್ಷಿಣ ವಿಭಾಗದ ಸಿಇಎನ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ನನ್ನ ಹೆಸರಿನಲ್ಲಿ ಬೇರೆ ಬೇರೆ ವ್ಯಕ್ತಿಗಳಿಗೆ ವಾಟ್ಸ್​ ಆ್ಯಪ್ ಸಂದೇಶ ಕಳಿಸುತ್ತಿರುವ ಕಿಡಿಗೇಡಿಗಳು, ಧನ ಸಹಾಯ ಮಾಡುವಂತೆ ಮನವಿ ಮಾಡುತ್ತಿದ್ದಾರೆ. ಆದ್ದರಿಂದ, ಈ ಕುರಿತು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ತಿಳಿಸಿದ್ದಾರೆ.

ಚಂದ್ರಶೇಖರ ಕಂಬಾರರು ಹಂಪಿ ಕನ್ನಡ ವಿಶ್ವವಿದ್ಯಾಲಯದ ಮೊದಲ ಕುಲಪತಿಗಳಾಗಿ ಕಾರ್ಯ ನಿರ್ವಹಿಸಿದ್ದು, ಅವರ ಸಮಗ್ರ ಸಾಹಿತ್ಯ ಕೃತಿಗೆ 2010 ರಲ್ಲಿ ಜ್ಞಾನಪೀಠ ಪ್ರಶಸ್ತಿ ದೊರೆತಿದೆ.