ಬೆಂಗಳೂರು: ಮಾವನ ಮಗನ ಕಿರುಕುಳಕ್ಕೆ ಬೇಸತ್ತ ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲೇ ನೇಣಿಗೆ ಶರಣಾಗಿರುವ ಮಾಡಿಕೊಂಡಿರುವ ಘಟನೆ ಬಾಗಲಗುಂಟೆಯ ಶೆಟ್ಟಿಹಳ್ಳಿಯಲ್ಲಿ ನಡೆದಿದೆ.
ಖಾಸಗಿ ಕಾಲೇಜಿನಲ್ಲಿ ಪ್ರಥಮ ಪಿಯು ಓದುತ್ತಿದ್ದ 16 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸಂಬಂಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಿರುಕುಳ ನೀಡು ತ್ತಿದ್ದ ಆರೋಪದಡಿ ಮಾವನ ಮಗ ಸ್ವಾಗತ್ (28) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ವೈದ್ಯ ಕೀಯ ಪರೀಕ್ಷೆಗೆ ಒಳಪಡಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು. ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಸ್ವಾಗತ್ ಹಾಗೂ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ ಹಲವು ವರ್ಷಗಳಿಂದ ಚೆನ್ನಾಗಿದ್ದರು. ಆದರೆ, ಇತ್ತೀಚೆಗೆ ಇಬ್ಬರ ಮಧ್ಯೆ ಭಿನ್ನಾಭಿಪ್ರಾಯ ಉಂಟಾಗಿ ಗಲಾಟೆ ಮಾಡಿಕೊಳ್ಳುತ್ತಿದ್ದರು. ಅದಕ್ಕೆ ಕೋಪಗೊಂಡಿದ್ದ ಆರೋಪಿ, ವಿದ್ಯಾರ್ಥಿನಿಗೆ ಕರೆ ಮಾಡಿ ಅಸಭ್ಯವಾಗಿ ಮಾತನಾಡುವುದು, ಸಾರ್ವಜನಿಕವಾಗಿ ಸಿಕ್ಕ ಕಡೆಯಲ್ಲಿ ನಿಂದಿಸುವುದು ಮಾಡುತ್ತಿದ್ದ. ಅದರಿಂದ ಬೇಸತ್ತ ವಿದ್ಯಾರ್ಥಿನಿ ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಸಂಜೆ ವಿದ್ಯಾರ್ಥಿನಿ ತಾಯಿ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ತಾಯಿ ದೂರು ನೀಡಿದ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.