ಮನೆ ರಾಜಕೀಯ ನಾನು ಯಾವತ್ತೂ ಜಮೀರ್ ಅವರನ್ನು ಕುಳ್ಳ ಎಂದು ಕರೆದಿಲ್ಲ: ಎಚ್.ಡಿ. ಕುಮಾರಸ್ವಾಮಿ

ನಾನು ಯಾವತ್ತೂ ಜಮೀರ್ ಅವರನ್ನು ಕುಳ್ಳ ಎಂದು ಕರೆದಿಲ್ಲ: ಎಚ್.ಡಿ. ಕುಮಾರಸ್ವಾಮಿ

0

ಮೈಸೂರು: ತಮ್ಮನ್ನು ಕರಿಯ ಎಂದು ಕರೆದಿದ್ದ ಸಚಿವ ಬಿ.ಝಡ್. ಜಮೀರ್ ಅಹಮದ್ ಖಾನ್ ಅವರಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ತಿರುಗೇಟು ನೀಡಿದರು.

Join Our Whatsapp Group

ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಗೆ ಶುಕ್ರವಾರ ಪೂಜೆ ಸಲ್ಲಿಸಿದ ಬಳಿಕ ಪತ್ರಕರ್ತರೊಂದಿಗೆ ಅವರು ಮಾತನಾಡಿದರು.

ಚಾಮುಂಡಿ ತಾಯಿ ಮುಂದೆ ನಿಂತು ಹೇಳುತ್ತಿದ್ದೇನೆ. ಬಸವರಾಜ ಹೊರಟ್ಟಿ ಅವತ್ತು ಒಮ್ಮೆ ನನ್ನನ್ನು ಕುಮಾರ ಎಂದಾಗ ಅವರನ್ನು ಹೊಡೆಯಲು ಹೋಗಿದ್ದ ಗಿರಾಕಿ ಇವರು. ಹೊರಟ್ಟಿ ಅವರನ್ನೇ ಕೇಳಬಹುದು. ಅವತ್ತು ಜಮೀರ್ ಹೊಡೆಯಲು ಬಂದಿರಲಿಲ್ಲವಾ ಅಂತ ಕೇಳಬಹುದು ಎಂದರು.

ಕರಿಯ, ಕುಳ್ಳ ಎಂದು ಮಾತಾಡಿಸಿಕೊಳ್ಳುವ ಸಂಸ್ಕೃತಿಯಿಂದ ಬಂದವ ನಾನಲ್ಲ. ಅವರ ಮಾತುಗಳು ಅವರ ಸಂಸ್ಕೃತಿಯನ್ನು ತೋರಿಸುತ್ತದೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಜಮೀರ್ ಮಾತುಗಳನ್ನು ಸಮರ್ಥಿಸಿಕೊಂಡಿದ್ದಾರೆ. ಇದು ನಾಗರಿಕ ಸರ್ಕಾರನಾ? ಇಂಥ ಮಾತು ಹೇಳಿದವರ ಮೇಲೆ ಎಷ್ಟು ಕೇಸ್ ಹಾಕಿ ಜೈಲಿಗೆ ಹಾಕಿಲ್ಲ ಈ ಸರ್ಕಾರ? ಈಗೇಕೆ ಸುಮ್ಮನೆ ಇದೆ? ಎಂದು ಕೇಳಿದರು.

ಮುಖ್ಯಮಂತ್ರಿಗೆ ದೇವೇಗೌಡರು ಗರ್ವಭಂಗ ಮಾಡುತ್ತೇನೆ, ಸೊಕ್ಕು ಮುರಿಯುತ್ತೇನೆ ಎನ್ನುವುದು ಮಾನನಷ್ಟ ಹೇಳಿಕೆನಾ ಎಂದು ಪ್ರಶ್ನಿಸಿದರು.

ನಾನು ಯಾವತ್ತೂ ಜಮೀರ್ ಅವರನ್ನು ಕುಳ್ಳ ಎಂದು ಕರೆದಿಲ್ಲ. ನಮ್ಮ ಸ್ನೇಹ ಇದ್ದದ್ದು ರಾಜಕೀಯವಾಗಿ ಅಷ್ಟೆ. ಈಗ ದುಡ್ಡಿನ ಮದದಿಂದ ಈ ರೀತಿ ಮಾತಾಡುತ್ತಿದ್ದಾರೆ ಎಂದರು.

ಸರ್ಕಾರ ಬೀಳಿಸಲು ಬಿಜೆಪಿಯವರು ಕಾಂಗ್ರೆಸ್‌ ಶಾಸಕರಿಗೆ ₹ 50 ಕೋಟಿ ಆಫರ್ ಮಾಡಿದ್ದಾರೆ ಎಂಬ ಮುಖ್ಯಮಂತ್ರಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿ ಹೇಳಿಕೆ ಬಫೂನ್ ರೀತಿ ಇದೆ. 50 ಜನರಿಗೆ ₹ 50 ಕೋಟಿ ಆಫರ್ ಮಾಡಿದ್ದಾರೆಂದು ನಿಖರವಾಗಿ ಹೇಳುತ್ತಿದ್ದಾರೆ. ಈ ಸರ್ಕಾರ ಪ್ರತಿಯೊಂದಕ್ಕು ಎಸ್ಐಟಿ ತನಿಖೆ ಮಾಡಿಸುತ್ತಿದೆ. ಇದನ್ನೂ ಎಸ್ಐಟಿಗೆ ಕೊಟ್ಟು ತನಿಖೆ ಮಾಡಿಸಲಿ ಎಂದರು.

ಚನ್ನಪಟ್ಟಣದಲ್ಲಿ ಜನತೆಯ ಆಶೀರ್ವಾದ ನಮಗೆ ಆಗಿದೆ. ಉತ್ತಮವಾದ ರೀತಿಯಲ್ಲಿ ಗೆಲ್ಲುತ್ತೇವೆ. ಏನೇನು ರಾಜಕೀಯ ನಡೆದಿದೆ ಎಂಬುದನ್ನು ಯೋಗೇಶ್ವರ್ ವಿಮರ್ಶೆ ಮಾಡಿದ್ದಾರೆ‌. ಜಮೀರ್ ಹೇಳಿಕೆಯಿಂದ ಏನೂ ವ್ಯತ್ಯಾಸ ಆಗಿಲ್ಲ. ನಾವು ಚನ್ನಪಟ್ಟಣದಲ್ಲಿ ಗೆಲ್ಲುತ್ತೇವೆ ಎಂದು ಹೇಳಿದರು.