ಮನೆ ಅಪರಾಧ ಎರಡು ಬೈಕ್ ಗಳ ಮುಖಾಮುಖಿ ಢಿಕ್ಕಿ: ಮೂವರ ಸಾವು

ಎರಡು ಬೈಕ್ ಗಳ ಮುಖಾಮುಖಿ ಢಿಕ್ಕಿ: ಮೂವರ ಸಾವು

0

ರಾಯಚೂರು(Raichur): ಜಿಲ್ಲೆಯ ಸಿರವಾರ ತಾಲೂಕಿನ ಜಕ್ಕಲದಿನ್ನಿ ಗ್ರಾಮದ ಹೊರವಲಯದಲ್ಲಿ ಎರಡು ಬೈಕ್​ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಮೃತರನ್ನು ವಿರುಪಾಕ್ಷಪ್ಪಗೌಡ ( 45), ಮಲ್ಲಮ್ಮ (38), ಮತ್ತೊಬ್ಬ ಹಟ್ಟಿ ಗಣಿ ಕಾರ್ಮಿಕ ಎಂದು ಗುರುತಿಸಲಾಗಿದೆ‌.

ಓವರ್​ಟೇಕ್ ಮಾಡುವ ಭರದಲ್ಲಿ ಎರಡು ಬೈಕ್​ಗಳ ನಡುವೆ ಡಿಕ್ಕಿಯಾಗಿದೆ. ಪರಿಣಾಮ ಓರ್ವ ಮಹಿಳೆ ಸೇರಿ ಮೂವರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸಿರವಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.