ಗಾಂಧಿನಗರ(ಗುಜರಾತ್): ಪಾಟಿದಾರ್ ಸಮುದಾಯದ ನಾಯಕ ಹಾರ್ದಿಕ್ ಪಟೇಲ್ ಇಂದು ಗುಜರಾತ್ನ ಗಾಂಧಿನಗರದಲ್ಲಿ ಆಯೋಜನೆ ಮಾಡಲಾಗಿದ್ದ ಅಧಿಕೃತವಾಗಿ ಭಾರತೀಯ ಜನತಾ ಪಾರ್ಟಿ ಸೇರ್ಡಪೆಯಾಗಿದ್ದಾರೆ.
ಬಿಜೆಪಿ ಗುಜರಾತ್ ಘಟಕದ ಮುಖ್ಯಸ್ಥ ಸಿ ಆರ್ ಪಾಟೀಲ್, ಮಾಜಿ ಉಪ ಮುಖ್ಯಮಂತ್ರಿ ನಿತಿನ್ ಪಟೇಲ್ ಮತ್ತು ಇತರೆ ನಾಯಕರ ಸಮ್ಮುಖದಲ್ಲಿ ಅವರು ಬಿಜೆಪಿ ಪಕ್ಷಕ್ಕೆ ಸೇರಿದ್ದಾರೆ.
ಪಕ್ಷ ಸೇರ್ಪಡೆಗೂ ಮುಂಚಿತವಾಗಿ ಟ್ವೀಟ್ ಮಾಡಿದ್ದ ಹಾರ್ದಿಕ್ ಪಟೇಲ್, ರಾಷ್ಟ್ರದ ಹಿತ, ದೇಶದ ಹಿತ, ಜನಹಿತ ಹಾಗೂ ಸಮಾಜದ ಹಿತದೃಷ್ಟಿಯಿಂದ ಇಂದಿನಿಂದ ಹೊಸ ಅಧ್ಯಾಯ ಆರಂಭಿಸುತ್ತಿದ್ದೇನೆ. ಭಾರತದ ಯಶಸ್ವಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಭಾಯ್ ಮೋದಿ ಜೀ ಅವರ ನೇತೃತ್ವದಲ್ಲಿ ನಡೆಯುತ್ತಿರುವ ರಾಷ್ಟ್ರ ಸೇವೆಯ ಭಗೀರಥ ಕಾರ್ಯದಲ್ಲಿ ಓರ್ವ ಸಣ್ಣ ಯೋಧನಂತೆ ಕೆಲಸ ಮಾಡಿಕೊಂಡು ಹೋಗುವೆ’ ಎಂದು ತಿಳಿಸಿದ್ದರು.
ಭಾರತೀಯ ಜನತಾ ಪಾರ್ಟಿ ಸೇರ್ಪಡೆ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ತಮ್ಮ ಅಹಮದಾಬಾದ್ ನಿವಾಸದಲ್ಲಿ ಹಾರ್ದಿಕ್ ಪಟೇಲ್ ವಿಶೇಷ ಪೂಜೆ ಸಲ್ಲಿಸಿದ್ದರು.
2015ರ ನಂತರ ಹೆಚ್ಚು ಬೆಳಕಿಗೆ ಬಂದಿದ್ದ ಹಾರ್ದಿಕ್ ಪಟೇಲ್ 2019ರಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದರು. ಗುಜರಾತ್ ವಿಧಾನಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು 2020ರ ಜುಲೈನಲ್ಲಿ ಇವರನ್ನು ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು. ಆದರೆ, ಪಕ್ಷದಲ್ಲಿನ ಒಳಜಗಳ, ಅರಾಜಕತೆಯಿಂದ ಬೇಸತ್ತು 2022ರ ಮೇ 18ರಂದು ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದು, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಪಕ್ಷ ಸೇರ್ಪಡೆ ನಂತರ ಮಾತನಾಡಿರುವ ಹಾರ್ದಿಕ್ ಪಟೇಲ್, ಕಾಂಗ್ರೆಸ್ ನ ಅತೃಪ್ತ ಶಾಸಕರು ಸೇರಿದಂತೆ ಕಾರ್ಯಕರ್ತರನ್ನು ಬಿಜೆಪಿಗೆ ಕರೆತರುವ ಕೆಲಸ ಮಾಡಲಾಗುವುದು ಎಂದಿದ್ದಾರೆ ಎಂದಿದ್ದಾರೆ.