ಮನೆ ರಾಜ್ಯ ಜೂನ್ 4 ರಂದು ಮಹಾಜನ ಪ್ರಥಮ ದರ್ಜೆ ಕಾಲೇಜಿನ ಪದವಿ ಪ್ರದಾನ ಸಮಾರಂಭ

ಜೂನ್ 4 ರಂದು ಮಹಾಜನ ಪ್ರಥಮ ದರ್ಜೆ ಕಾಲೇಜಿನ ಪದವಿ ಪ್ರದಾನ ಸಮಾರಂಭ

0

ಮೈಸೂರು(Mysuru): ಮಹಾಜನ ಪ್ರಥಮ ದರ್ಜೆ ಕಾಲೇಜಿನ ಪದವಿ ಪ್ರದಾನ ಸಮಾರಂಭ ಜೂನ್‌ 4ರಂದು ನಡೆಯಲಿದ್ದು, 10 ಮಂದಿಗೆ ಚಿನ್ನದ ಪದಕ ಸೇರಿದಂತೆ 274 ಮಂದಿಗೆ ಪದವಿ ಪ್ರದಾನ ಮಾಡಲಾಗುವುದು ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ.ಬಿ.ಆರ್‌.ಜಯಕುಮಾರಿ ತಿಳಿಸಿದರು.

ಗುರುವಾರ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಾಲೇಜಿನ ಡಾ.ಎಪಿಜೆ ಅಬ್ದುಲ್‌ ಕಲಾಂ ಸಭಾಂಗಣದಲ್ಲಿ ಶನಿವಾರ ಬೆಳಿಗ್ಗೆ 11.30ಕ್ಕೆ ಕಾರ್ಯಕ್ರಮ ನಡೆಯಲಿದ್ದು, ಆಂಧ್ರಪ್ರದೇಶದ ಗುಂಟೂರಿನ ‘ವಿಜ್ಞಾನ್‌ ಫೌಂಡೇಶನ್‌ ಸೈನ್ಸ್‌ ಅಂಡ್‌ ಟೆಕ್ನಾಲಜಿ ರೀಸರ್ಚ್‌’ ವಿಶ್ವವಿದ್ಯಾಲಯದ ಕುಲಪತಿ ಡಾ.ಪಿ.ನಾಗಭೂಷಣ ‍ಪ್ರಧಾನ ಭಾಷಣ ಮಾಡಲಿದ್ದಾರೆ ಎಂದು ತಿಳಿಸಿದರು.

ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್, ಮಹಾಜನ ವಿದ್ಯಾಸಂಸ್ಥೆಯ ಅಧ್ಯಕ್ಷ ಟಿ.ಮುರಳೀಧರ್ ಭಾಗವತ್‌, ಕಾರ್ಯದರ್ಶಿ ಡಾ.ಟಿ.ವಿಜಯಲಕ್ಷ್ಮೀ ಮುರಳೀಧರ್ ಭಾಗವಹಿಸುವರು ಎಂದರು.

ಸಂಸ್ಥೆಯ ನಿರ್ದೇಶಕ ಡಾ.ಸಿ.ಕೆ.ರೇಣುಕಾರ್ಯ ಮಾತನಾಡಿ, 2019–21ನೇ ಸಾಲಿನಲ್ಲಿ 106 ಎಂ.ಎಸ್ಸಿ, 40 ಎಂ.ಕಾಂ, 109 ಎಂಬಿಎ, 13 ಎಂಎಸ್‌ಡಬ್ಲ್ಯು, 9 ಎಂಟಿಎಂಎಂ ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣ ಪತ್ರಗಳನ್ನು ನೀಡಲಾಗುತ್ತಿದೆ. 2019ರಲ್ಲಿ ಸ್ವಾಯತ್ತ ಕಾಲೇಜಾದ ನಂತರ ನಡೆಯುತ್ತಿರುವ ಮೊದಲ ಪದವಿ ಪ್ರದಾನ ಸಮಾರಂಭ ಇದಾಗಿದೆ  ಎಂದು ಮಾಹಿತಿ ನೀಡಿದರು.

ಗೋಷ್ಠಿಯಲ್ಲಿ ಕಾಲೇಜಿನ ಪರೀಕ್ಷಾ ನಿಯಂತ್ರಣಾಧಿಕಾರಿ ಆರ್.ಮಂಜುನಾಥ್, ಶೈಕ್ಷಣಿಕ ಡೀನ್ ಡಾ.ಎಚ್.ಶ್ರೀಧರ್, ಡಾ.ತಿಮ್ಮೇಗೌಡ, ಡಾ.ಎಲ್‌.ರವಿ ಇದ್ದರು.