ಬೆಂಗಳೂರು: ಬನ್ನಪ್ಪ ರಸ್ತೆಯ ಬಳಿ ಓರ್ವ ಅಪರಿಚಿತ ವ್ಯಕ್ತಿಯು ದ್ವಿ-ಚಕ್ರ ವಾಹನದಲ್ಲಿ ನಿಷೇಧಿತ ಮಾದಕ ವಸ್ತುವಾದ ಗಾಂಜಾವನ್ನು ಬ್ಯಾಗ್ ನಲ್ಲಿಟ್ಟುಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಕುರಿತು ದೊರೆತ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಹಲಸೂರು ಗೇಟ್ ಠಾಣಾ ಪೊಲೀಸರು ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ವಶಕ್ಕೆ ಪಡೆದ ವ್ಯಕ್ತಿಯನ್ನು ವಿಚಾರಣೆ ಮಾಡಲಾಗಿ, ಮಹಾರಾಷ್ಟ್ರ ದೊಡ್ಲದಿಂದ ನಿಷೇಧಿತ ಮಾದಕ ವಸ್ತುವಾದ ಗಾಂಜಾವನ್ನು ಕಡಿಮೆ ಬೆಲೆಗೆ ತಂದು ಹೆಚ್ಚಿನ ಲಾಭಕ್ಕಾಗಿ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವುದಾಗಿ ತಿಳಿಸಿರುತ್ತಾನೆ.
ಆರೋಪಿಯು ಕೃತ್ಯಕ್ಕೆ ಬಳಸಿದ್ದ 1 ದ್ವಿ-ಚಕ್ರ ವಾಹನ, ಬ್ಯಾಗ್ ನಲ್ಲಿದ್ದ 12 ಕೆ.ಜಿ 200 ಗ್ರಾಂ ಗಾಂಜಾ, 1 ಮೊಬೈಲ್ ಫೋನ್ ಹಾಗೂ ನಗದು 1600 ರೂ.ಗಳನ್ನು ವಶಪಡಿಸಿಕೊಳ್ಳಲಾಯಿತು.
ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತೆ
ಕೇಂದ್ರ ವಿಭಾಗದ ಡಿ.ಸಿ.ಪಿ. ಶೇಖರ್.ಟಿ ಮತ್ತು ಹಲಸೂರುಗೇಟ್ ಉಪ ವಿಭಾಗದ ಎ.ಸಿ.ಪಿ. ಶಿವಾನಂದ ಚಲವಾದಿ ರವರ ಮಾರ್ಗದರ್ಶನದಲ್ಲಿ ಹಲಸೂರುಗೇಟ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಹನಮಂತ ಕೆ. ಭಜಂತ್ರಿ. ರವರ ನೇತೃತ್ವದ ಅಧಿಕಾರಿ/ಸಿಬ್ಬಂದಿಗಳ ತಂಡ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.