ಬೆಂಗಳೂರು: ಬೆಂಗಳೂರಿನಲ್ಲಿ ಟೌನ್ ಪ್ಲಾನಿಂಗ್ ನಿರ್ದೇಶಕ ತಿಪ್ಪೇಸ್ವಾಮಿ ಬನಶಂಕರಿಯ 3ನೇ ಹಂತದ ವಿಶ್ವೇಶ್ವರಯ್ಯ ರಸ್ತೆಯಲ್ಲಿರುವ ನಿವಾಸದಲ್ಲಿ ಮೇಲೆ ಲೋಕಾಯುಕ್ತ ದಾಳಿ ವೇಳೆ ಅಪಾರ ಮೌಲ್ಯದ ಆಸ್ತಿ ದಾಖಲೆಗಳು, ಚಿನ್ನಾಭರಣ ಪತ್ತೆಯಾಗಿದೆ.
28 ಕ್ಕೂ ಹೆಚ್ಚು ಜೊತೆ ಓಲೆ, 23 ಕ್ಕೂ ಹೆಚ್ಚು ಚಿನ್ನದ ಸರ, ಮುತ್ತಿನ ಹಾರ ಪತ್ತೆಯಾಗಿದೆ. ಇದಿಷ್ಟೇ ಅಲ್ಲ, ಕೋಟಿ ರೂಪಾಯಿ ಮೌಲ್ಯದ ಚಿನ್ನದ ನೆಕ್ಲೆಸ್, ಚಿನ್ನದ ಉಂಗುರವೂ ಪತ್ತೆಯಾಗಿದೆ.
ಕೇವಲ ಬಂಗಾರ ಮಾತ್ರ ಅಲ್ಲದೆ, 500, 200 ರೂ. ಮುಖ ಬೆಲೆಯ 8 ಲಕ್ಷ ರೂಪಾಯಿ ನಗದು ಪತ್ತೆಯಾಗಿದೆ. 8 ಕ್ಕೂ ಹೆಚ್ಚು ದುಬಾರಿ ಬೆಲೆಯ ಬ್ರಾಂಡೆಡ್ ವಾಚ್ಗಳು ಸಿಕ್ಕಿವೆ. ಇನ್ನು ಕೆಜಿಗಟ್ಟಲೆಯ ಬೆಳ್ಳಿ ಸಾಮಾಗ್ರಿಗಳು ಕೂಡ ಪತ್ತೆಯಾಗಿದೆ.
ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ಅಬಕಾರಿ ಇಲಾಖೆ ಎಸ್ಪಿ ಮನೆ ಮೇಲೂ ಲೋಕಾಯುಕ್ತ ದಾಳಿ ಮಾಡಿದೆ. ಬೆಳಗ್ಗೆ 6 ಗಂಟೆಯ ವೇಳೆ ಅಬಕಾರಿ ಇಲಾಖೆ ಎಸ್ಪಿ ಮೋಹನ್ ಮನೆ ಮೇಲೆ ರೇಡ್ ಮಾಡಲಾಗಿದೆ. ಮಹತ್ವದ ದಾಖಲೆಗಳನ್ನ ಪರಿಶೀಲನೆ ಮಾಡಲಾಯಿತು.