ಶ್ರೀನಗರ (Srinagar): ಉಗ್ರರು ನಡೆಸಿದ ಗುಂಡಿನ ದಾಳಿಗೆ ಓರ್ವ ವಲಸೆ ಕಾರ್ಮಿಕ ಮೃತಪಟ್ಟು, ಮತ್ತೊಬ್ಬರು ಗಾಯಗೊಂಡಿರು ಘಟನೆ ಜಮ್ಮು ಮತ್ತು ಕಾಶ್ಮೀರದ ಬದ್ಗಾಮ್ ಜಿಲ್ಲೆಯಲ್ಲಿ ಗುರುವಾರ ರಾತ್ರಿ ನಡೆದಿದೆ.
ಬಿಹಾರದ ಅರ್ನಿಯಾ ಪ್ರದೇಶದ ನಿವಾಸಿ ದಿಲ್ಕುಶ್ ಕುಮಾರ್(17)ಉಗ್ರರ ದಾಳಿಗೆ ಮೃತಪಟ್ಟವರು. ಕುಮಾರ್ ನನ್ನು ಇಲ್ಲಿನ ಎಸ್ಎಂಎಚ್ಎಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದರು. ಗಾಯಗೊಂಡ ಗುರಿಗೆ ಚಿಕಿತ್ಸೆ ಕೊಡಿಸಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇವರಿಬ್ಬರು ಮಧ್ಯ ಕಾಶ್ಮೀರ ಜಿಲ್ಲೆಯ ಚದೂರ ಪ್ರದೇಶದಲ್ಲಿನ ಮಗ್ರೆಪೋರಾದ ಇಟ್ಟಿಗೆ ಭಟ್ಟಿಯಲ್ಲಿ ಕೆಲಸ ಮಾಡುತ್ತಿದ್ದರು.
ಪೊಲೀಸರು ಈ ಪ್ರದೇಶವನ್ನು ಸುತ್ತುವರೆದಿದ್ದು, ಉಗ್ರರಿಗಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.