ಕೆ.ಆರ್.ಪೇಟೆ: ತಾಲ್ಲೂಕಿನ ವಳಗೆರೆಮೆಣಸ ಗ್ರಾಮದಲ್ಲಿ ಹಾದು ಹೋಗಿರುವ ಜಲಸೂರು- ಬೆಂಗಳೂರು ಹೆದ್ದಾರಿಯಲ್ಲಿ ಮಂಗಳವಾರ ಸಂಜೆ ಬೊಲೆರೊ ಜೀಪ್ ಮತ್ತು ಬೈಕ್ ನಡುವೆ ಸಂಭವಿಸಿದ ಬೈಕ್ ಅಪಘಾತದಲ್ಲಿ ಬೈಕ್ ಸವಾರ ಗ್ರಾಮದ ರಮೇಶ್ (63) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಗ್ರಾಮದಲ್ಲಿ ನಡೆಯುತ್ತಿದ್ದ ತಂದ್ರಿದೇವಿ ಅಮ್ಮನ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮನೆಗೆ ಪ್ರಸಾದ ತೆಗೆದುಕೊಂಡು ಜಯರಾಂ ಅವರ ಬೈಕಿನಲ್ಲಿ ಹೋಗುತ್ತಿದ್ದಾಗ ಸಂತೇಬಾಚಹಳ್ಳಿ ಕಡೆಯಿಂದ ಬಂದ ಜೀಪು ಡಿಕ್ಕಿ ಹೊಡೆದಿದೆ.
ಗಾಯಗೊಂಡಿರುವ ಜೀಪು ಚಾಲಕ ಜಯರಾಂ ಅವರಿಗೆ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಘಟನಾ ಸ್ಥಳಕ್ಕೆ ಪಟ್ಟಣ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸುಮಾರಾಣಿ ಭೇಟಿ ನೀಡಿ ಪರಿಶೀಲಿಸಿದರು.














