ಮನೆ ಅಪರಾಧ ಕಲಬುರಗಿ ಸೆಂಟ್ರಲ್ ಜೈಲ್ ಮುಖ್ಯ ಅಧೀಕ್ಷಕಿ ಕಾರು ಸ್ಫೋಟಿಸುವ ಬೆದರಿಕೆ

ಕಲಬುರಗಿ ಸೆಂಟ್ರಲ್ ಜೈಲ್ ಮುಖ್ಯ ಅಧೀಕ್ಷಕಿ ಕಾರು ಸ್ಫೋಟಿಸುವ ಬೆದರಿಕೆ

0

ಕಲಬುರಗಿ: ಕಲಬುರಗಿ ಸೆಂಟ್ರಲ್ ಜೈಲು ಮುಖ್ಯ ಅಧೀಕ್ಷಕಿ ಅನಿತಾ ಅವರ ಕಾರು ಸ್ಫೊಟಿಸುವುದಾಗಿ ಅನಾಮಧೇಯ ವ್ಯಕ್ತಿಯಿಂದ ಆಡಿಯೋ ಸಂದೇಶ ಬಂದಿದೆ.

Join Our Whatsapp Group

ಕಾರು ಸ್ಫೊಟಿಸುವ ಮೂಲಕ ಅನಿತಾ ಹತ್ಯೆಗೆ ಸಂಚು ಹೂಡಲಾಗಿದೆಯೇ ಎಂಬ ಅನುಮಾನ ಇದೀಗ ಬಲವಾಗಿದೆ. ಕಲಬುರಗಿ ನಗರದ ಪೊಲೀಸ್ ಇನ್ಸ್​ಪೆಕ್ಟರ್ ಮೊಬೈಲ್​ಗೆ ಆಡಿಯೋ ಸಂದೇಶ ಬಂದಿದೆ.

ಸದ್ಯ ಪೊಲೀಸ್ ಇನ್ಸ್​ಪೆಕ್ಟರ್ ಆಡಿಯೋ ಬೆದರಿಕೆ ಸಂದೇಶದ ಬಗ್ಗೆ ಸುಪರಿಂಟೆಂಡೆಂಟ್ ಗಮನಕ್ಕೆ ತಂದಿದ್ದಾರೆ. ಇದೀಗ ಬೆದರಿಕೆ ಸಂದೇಶದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಅನಿತಾ, ಸಿಸಿಟಿವಿ ಕಣ್ಗಾವಲಿನಲ್ಲೇ ಕಾರು ಪಾರ್ಕ್ ಮಾಡುವಂತೆ ಸೂಚನೆ ನೀಡಿದ್ದಾರೆ. ಜೈಲಿನ ಬಳಿ ಹಾಗೂ ಇತರೆಡೆಗಳಲ್ಲಿ ಎಲ್ಲೇ ಆದರೂ ಸಿಸಿಟಿವಿ ಇರುವ ಕಡೆ ಕಾರ್ ಪಾರ್ಕಿಂಗ್ ಮಾಡಲು ಸೂಚನೆ ನೀಡಿದ್ದಾರೆ.