ಮನೆ ರಾಷ್ಟ್ರೀಯ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ ಗಾಂಧಿ ವಾದ್ರಾ

ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ ಗಾಂಧಿ ವಾದ್ರಾ

0

ನವದೆಹಲಿ: ವಯನಾಡ್ ಲೋಕಸಭಾ ಉಪಚುನಾವಣೆಯಲ್ಲಿ ಭರ್ಜರಿ ಜಯದಾಖಲಿಸುವ ಮೂಲಕ ಮೊಟ್ಟ ಮೊದಲ ಬಾರಿಗೆ ಸಂಸತ್ ಪ್ರವೇಶಿಸಿರುವ ಪ್ರಿಯಾಂಕಾ ಗಾಂಧಿ ವಾದ್ರಾ ಗುರುವಾರ ಸಂಸತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.

Join Our Whatsapp Group

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಂದ ಪ್ರಿಯಾಂಕಾ ಪ್ರಮಾಣ ವಚನ ಸ್ವೀಕರಿಸಿದರು.

ಪ್ರಿಯಾಂಕಾ ಗಾಂಧಿ ಅವರು ಕೇರಳದ ಸಾಂಪ್ರದಾಯಿಕ ಬ್ರೋಕೆಡ್ ಸೀರೆಯನ್ನು ಧರಿಸಿದ್ದರು. ಕೈಯಲ್ಲಿ ಸಂವಿಧಾನದ ಪುಸ್ತಕ ಹಿಡಿದು ಪ್ರಮಾಣ ವಚನ ಸ್ವೀಕರಿಸಿದರು.

ಪ್ರಿಯಾಂಕಾ ಗಾಂಧಿ ಅವರ ಪತಿ ರಾಬರ್ಟ್ ವಾದ್ರಾ, ಇಬ್ಬರು ಮಕ್ಕಳು ಹಾಗೂ ತಾಯಿ ಸೋನಿಯಾ ಗಾಂಧಿ ಹಾಗೂ ಸಹೋದರ ರಾಹುಲ್‌ ಗಾಂಧಿ ಪ್ರಮಾಣ ವಚನ ಸ್ವೀಕರಿಸುವ ವೇಳೆ ಹಾಜರಿದ್ದರು.

ಪ್ರಿಯಾಂಕಾ ಸಂಸದೆಯಾಗಿ ಆಯ್ಕೆಯಾಗುವ ಮೂಲಕ ಸಂಸತ್ತಿನಲ್ಲಿ ಗಾಂಧಿ ಕುಟುಂಬದ ಮೂವರು ಸದಸ್ಯರಿದ್ದಾರೆ.  ಸೋನಿಯಾ ಗಾಂಧಿ ರಾಜ್ಯಸಭಾ ಸದಸ್ಯರಾಗಿದ್ದು ರಾಹುಲ್‌ ಗಾಂಧಿ ರಾಯ್‌ಬರೇಲಿಯ ಸಂಸದರಾಗಿದ್ದಾರೆ.