ತಿರುವನಂತಪುರ(Thiruvananthapuram): ಕೇರಳದಲ್ಲಿ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ತಮ್ಮ ಸರ್ಕಾರ ಜಾರಿಗೆ ತರುವುದಿಲ್ಲ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.
ಎಲ್ ಡಿಎಫ್ ಸರ್ಕಾರದ ಮೊದಲ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ನಮ್ಮ ಸರ್ಕಾರವು ಹೊಂದಿರುವ ಸ್ಪಷ್ಟ ನಿಲುವು ಮುಂದುವರಿಯುತ್ತದೆ’ ಎಂದು ತಿಳಿಸಿದ್ದಾರೆ.
ದೇಶದಲ್ಲಿ ಜಾತ್ಯತೀತತೆಯನ್ನು ನಾಶಮಾಡುವ ಪ್ರಯತ್ನಗಳು ನಡೆಯುತ್ತಿದ್ದು, ಧರ್ಮದ ಆಧಾರದ ಮೇಲೆ ಪೌರತ್ವವನ್ನು ನಿರ್ಧರಿಸಲಾಗುತ್ತಿದೆ. ಆದರೆ, ನಮ್ಮ ರಾಜ್ಯದಲ್ಲಿ ಧರ್ಮದ ಆಧಾರದ ಮೇಲೆ ಪೌರತ್ವವನ್ನು ನಿರ್ಧರಿಸುವುದಿಲ್ಲ. ಇದು ನಮ್ಮ ಸರ್ಕಾರದ ದೃಢ ನಿಲುವು ಎಂದು ತಿಳಿಸಿದ್ದಾರೆ. ಜನರಲ್ಲಿ ಕೋಮು ಉದ್ವಿಗ್ನತೆಯನ್ನು ಉಂಟುಮಾಡಲು ದೇಶದ ವಿವಿಧ ಭಾಗಗಳಲ್ಲಿ ಹಲವಾರು ಸಮೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.