ಮನೆ ರಾಜ್ಯ ಸುವರ್ಣ ವಿಧಾನಸೌಧದ ಸುತ್ತ ನಿಷೇಧಾಜ್ಞೆ

ಸುವರ್ಣ ವಿಧಾನಸೌಧದ ಸುತ್ತ ನಿಷೇಧಾಜ್ಞೆ

0

ಬೆಳಗಾವಿ: ಚಳಿಗಾಲದ ಅಧಿವೇಶನ ಹಿನ್ನೆಲೆಯಲ್ಲಿ ಸುವರ್ಣ ವಿಧಾನ ಸೌಧ ಸುತ್ತ ನಿಷೇಧಾಜ್ಞೆ ಹೇರಲಾಗಿದೆ.

Join Our Whatsapp Group

ಸುವರ್ಣ ವಿಧಾನ ಸೌಧದಲ್ಲಿ ಡಿ.9 ರಿಂದ 20 ರವರೆಗೆ ಚಳಿಗಾಲ ಅದಿವೇಶನ ನಡೆಯಲಿದ್ದು, ಈ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತತೆ ಕಾಪಾಡುವ ಹಿತದೃಷ್ಟಿಯಿಂದ ಸುವರ್ಣ ವಿಧಾನ ಸೌಧದ ಸುತ್ತಲೂ ಸುಮಾರು 500 ಮೀ. ಸುತ್ತಳತೆಯಲ್ಲಿ ಡಿ.1 ರಿಂದ 30 ವರೆಗೆ ನಿಷೇಧಾಜ್ಞೆ ಹೊರಡಿಸಿ ನಗರ ಪೊಲೀಸ್ ಆಯುಕ್ತರಾದ ಯಡಾ ಮಾರ್ಟಿನ್ ಮಾರ್ಬನ್ಯಾಂಗ ಅವರು ಆದೇಶಿಸಿದ್ದಾರೆ.

ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಅವರು  ತಿಳಿಸಿದ್ದಾರೆ.