ಮನೆ ಆರೋಗ್ಯ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಗೆ ಕೋವಿಡ್ ದೃಢ

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಗೆ ಕೋವಿಡ್ ದೃಢ

0

ನವದೆಹಲಿ(New Delhi): ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಕೊರೊನಾ ಸೋಂಕು ತಗುಲಿದೆ.

ಈ ಕುರಿತು ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಕೊರೊನಾ ಸೋಂಕಿನ ಸೌಮ್ಯ ಲಕ್ಷಣಗಳಿರುವ ಕಾರಣಕ್ಕೆ ನಾನು ಕೋವಿಡ್ ಪರೀಕ್ಷೆಗೆ ಒಳಗಾಗಿದ್ದೆ. ಇದೀಗ ವರದಿ ಪಾಸಿಟಿವ್ ಬಂದಿದೆ. ಮಾರ್ಗಸೂಚಿಗಳನ್ನು ಪಾಲಿಸುತ್ತಿದ್ದು, ವೈದ್ಯರ ಸಲಹೆ ಮೇರೆಗೆ ಪ್ರತ್ಯೇಕವಾಸದಲ್ಲಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ನನ್ನ ಸಂಪರ್ಕಕ್ಕೆ ಬಂದವರು ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಪ್ರಿಯಾಂಕಾ ಮನವಿ ಮಾಡಿದ್ದಾರೆ.

ಇತ್ತ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೂ ಗುರುವಾರ ಕೋವಿಡ್‌ ದೃಢಪಟ್ಟಿದ್ದು, ಮನೆಯಲ್ಲೇ ಪ್ರತೇಕವಾಸದಲ್ಲಿದ್ದಾರೆ.