ಮನೆ ಕಾನೂನು ಮುಡಾ ಕೇಸ್: ಇಡಿ ವಿಚಾರಣೆಗೆ ಹಾಜರಾದ ಐಎಎಸ್ ಅಧಿಕಾರಿ ದೀಪಾ ಚೋಳನ್

ಮುಡಾ ಕೇಸ್: ಇಡಿ ವಿಚಾರಣೆಗೆ ಹಾಜರಾದ ಐಎಎಸ್ ಅಧಿಕಾರಿ ದೀಪಾ ಚೋಳನ್

0

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ನಗರಾಭಿವೃದ್ದಿ ಇಲಾಖೆಯ ಕಾರ್ಯದರ್ಶಿ ದೀಪಾ ಚೋಳನ್ ಜಾರಿ ನಿರ್ದೇಶನಾಲಯದ ಎದುರು ವಿಚಾರಣೆಗೆ ಹಾಜರಾಗಿದ್ದಾರೆ.

Join Our Whatsapp Group

ಪ್ರಕರಣ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ ಅಧಿಕಾರಿಗಳು  ಮುಡಾ ದಾಖಲೆ ತಿದ್ದಿದ ಆರೋಪ  ಮೇಲೆ ನಿನ್ನೆ ನಗರಾಭಿವೃದ್ದಿ ಇಲಾಖೆಯ ಕಾರ್ಯದರ್ಶಿ ದೀಪಾ ಚೋಳನ್  ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು.

ಇದೀಗ ಬೆಂಗಳೂರಿನ ಶಾಂತಿನಗರದಲ್ಲಿರುವ ಜಾರಿ ನಿರ್ದೇಶನಾಲಯ ಕಚೇರಿಗೆ  ದಾಖಲೆಗಳ ಸಮೇತ ದೀಪಾ ಚೋಳನ್ ವಿಚಾರಣೆಗೆ ಹಾಜರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.