ಮನೆ ರಾಜ್ಯ ಸೈಟು ಲಪಟಾಯಿಸಿ ಸ್ವಾಭಿಮಾನಿ ಸಮಾವೇಶ ಮಾಡಿದರೆ ಪಾಪ ಕಳೆದುಹೋಗುತ್ತದೆಯೇ?: ಆರ್. ಅಶೋಕ

ಸೈಟು ಲಪಟಾಯಿಸಿ ಸ್ವಾಭಿಮಾನಿ ಸಮಾವೇಶ ಮಾಡಿದರೆ ಪಾಪ ಕಳೆದುಹೋಗುತ್ತದೆಯೇ?: ಆರ್. ಅಶೋಕ

0

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ.ಪಾರ್ವತಿ ಅವರಿಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು (ಮುಡಾ) 14 ಬದಲಿ ನಿವೇಶನಗಳನ್ನು ಹಂಚಿಕೆ ಮಾಡುವಲ್ಲಿ ಹಲವು ಅಕ್ರಮಗಳು ನಡೆದಿವೆ ಎಂದು ಜಾರಿ ನಿರ್ದೇಶನಾಲಯವು (ಇ.ಡಿ) ಹೇಳಿದೆ.

Join Our Whatsapp Group

ಈ ಕುರಿತು ಸಿಎಂ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಮಾಧ್ಯಮ ‘ಎಕ್ಸ್‌’ನಲ್ಲಿ ವಾಗ್ದಾಳಿ ನಡೆಸಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ, ‘ಸೈಟ್ ಲಪಟಾಯಿಸಿ ಸ್ವಾಭಿಮಾನಿ ಸಮಾವೇಶ ಮಾಡಿದರೆ ಪಾಪ ಕಳೆದು ಹೋಗುತ್ತದೆಯೇ’ ಎಂದು ಪ್ರಶ್ನಿಸಿದ್ದಾರೆ.

ಸಿಎಂ ಸಿದ್ದರಾಮಯ್ಯನವರ ಪತ್ನಿಯವರಿಗೆ 14 ನಿವೇಶನ ಹಂಚಿಕೆ ಮಾಡುವಲ್ಲಿ ಹಲವು ಅಕ್ರಮಗಳು ನಡೆದಿವೆ ಎಂದು ಇ.ಡಿ. ವರದಿಯಲ್ಲಿ ಬಯಲಾಗಿದ್ದು, ಮೂಡಾ ಪ್ರಕರಣದಲ್ಲಿ ನನ್ನ ಪಾತ್ರವೇ ಇಲ್ಲ ಎನ್ನುತ್ತಿದ್ದ ಮುಖ್ಯಮಂತ್ರಿಗಳು ಈಗ ಅನೇಕ ಪ್ರಶ್ನೆಗಳಿಗೆ ಉತ್ತರಿಸಬೇಕಿದೆ. ಸಿಎಂ ಸಿದ್ದರಾಮಯ್ಯನವರೇ, ನಮ್ಮ ದೇಶದಲ್ಲಿ ಕಾನೂನು ಇನ್ನೂ ಗಟ್ಟಿಯಾಗಿದೆ. ತರಾತುರಿಯಲ್ಲಿ ಲೋಕಾಯುಕ್ತ ತನಿಖೆ ಮುಗಿಸಿ ಕ್ಲೀನ್ ಚಿಟ್ ಪಡೆದುಕೊಂಡು ಜನರ ಕಣ್ಣಿಗೆ ಮಣ್ಣೆರೆಚುವ ನಿಮ್ಮ ತಂತ್ರ ಫಲಿಸುವುದಿಲ್ಲ. ಉಪ್ಪು ತಿಂದವರು ನೀರು ಕುಡಿಯಲೇಬೇಕು. ಸತ್ಯಮೇವ ಜಯತೇ ಎಂದು ಬರೆದುಕೊಂಡಿದ್ದಾರೆ.