ಮನೆ ಕಾನೂನು ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ಮನಮೋಹನ್ ಪ್ರಮಾಣವಚನ ಸ್ವೀಕಾರ

ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ಮನಮೋಹನ್ ಪ್ರಮಾಣವಚನ ಸ್ವೀಕಾರ

0

ದೆಹಲಿ: ಸುಪ್ರೀಂ ಕೋರ್ಟ್‌ ನ ನ್ಯಾಯಮೂರ್ತಿಯಾಗಿ ದೆಹಲಿ ಹೈಕೋರ್ಟ್‌ ನ ಮುಖ್ಯ ನ್ಯಾಯಮೂರ್ತಿ ಮನಮೋಹನ್ ಅವರು ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ.

Join Our Whatsapp Group

ಸುಪ್ರೀಂ ಕೋರ್ಟ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ಅವರು ಮನಮೋಹನ್ ಅವರಿಗೆ ಪ್ರಮಾಣವಚನ ಬೋಧಿಸಿದರು.

ನ್ಯಾಯಮೂರ್ತಿ ಮನಮೋಹನ್ ಪ್ರಮಾಣವಚನ ಸ್ವೀಕಾರದೊಂದಿಗೆ, ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ಸಂಖ್ಯೆ 33ಕ್ಕೆ ಏರಿಕೆಯಾಗಿದೆ.

ನವೆಂಬರ್ 28ರಂದು ಸುಪ್ರೀಂ ಕೋರ್ಟ್‌ನ ಕೊಲಿಜಿಯಂ, ನ್ಯಾಯಮೂರ್ತಿ ಮನಮೋಹನ್ ಅವರನ್ನು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಯಾಗಿ ನೇಮಕ ಮಾಡಲು ಒಮ್ಮತದ ಶಿಫಾರಸು ಮಾಡಿತ್ತು.

ಸಿಜೆಐ ಸೇರಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಮಂಜೂರಾದ 34 ನ್ಯಾಯಮೂರ್ತಿಗಳ ಹುದ್ದೆಗಳಿವೆ.