ಬೆಳಗಾವಿ: ಐಗಳಿ ಪೋಲಿಸ್ ಠಾಣೆಯ ಎಎಸ್ಐ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಐಗಳಿ ಪೋಲಿಸ್ ಠಾಣೆಯಲ್ಲಿ ಎಎಸ್ಐ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಶಂಭು ಮೆತ್ರಿ (50) ಇಂದು(ಡಿಸೆಂಬರ್ 06) ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅನಂತಪೂರ ಗ್ರಾಮದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆದ್ರೆ, ಶಂಭು ಮೆತ್ರಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿದಲ್ಲ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಅಥಣಿ ಪೋಲಿಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ.