ಮನೆ ರಾಜಕೀಯ ಕಳಪೆ ಗುಣಮಟ್ಟದ ಐವಿ ದ್ರಾವಣ ಕೊಟ್ಟಿದ್ದೇ ಬಾಣಂತಿಯರ ಸಾವಿಗೆ ಕಾರಣ: ಪ್ರಲ್ಹಾದ್​ ಜೋಶಿ

ಕಳಪೆ ಗುಣಮಟ್ಟದ ಐವಿ ದ್ರಾವಣ ಕೊಟ್ಟಿದ್ದೇ ಬಾಣಂತಿಯರ ಸಾವಿಗೆ ಕಾರಣ: ಪ್ರಲ್ಹಾದ್​ ಜೋಶಿ

0

ಬೆಂಗಳೂರು: ಕಳಪೆ ಗುಣಮಟ್ಟದ ಐವಿ ದ್ರಾವಣ ಕೊಟ್ಟಿದ್ದೇ ಬಾಣಂತಿಯರ ಸಾವಿಗೆ ಕಾರಣ. ಆದರೆ ಕೇಂದ್ರ ವಿರುದ್ಧ ಪದೇಪದೆ ಕಾಂಗ್ರೆಸ್ ನಾಯಕರು ಆರೋಪ ಮಾಡುತ್ತಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಕಿಡಿಕಾರಿದ್ದಾರೆ.

Join Our Whatsapp Group

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಾಣಂತಿಯರ ಸಾವಿನ ಸಂಖ್ಯೆ ಜಾಸ್ತಿ ಆಗಿದೆ. ಸಿದ್ದರಾಮಯ್ಯ ರಾಜಕೀಯಕ್ಕೆ ಬರುವಾಗ ಬಳ್ಳಾರಿ ಬಗ್ಗೆ ಬಹಳಷ್ಟು ಮಾತಾಡಿದ್ದಾರೆ. ಐವಿ ದ್ರಾವಣ ಸ್ಯಾಂಪಲ್​​ಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದ್ದರೂ ಪಕ್ಕದ ರಾಜ್ಯಗಳಲ್ಲಿ ಯಾಕೆ ಈ ರೀತಿಯ ಸಮಸ್ಯೆ ಆಗಲಿಲ್ಲ. ತೆಲಂಗಾಣ ರಾಜ್ಯದಲ್ಲಿ ಕಾಂಗ್ರೆಸ್​ ಸರ್ಕಾರವೇ ಇದೆಯಲ್ವಾ? ಅಲ್ಲಿ ಯಾಕೆ ಈ ರೀತಿಯ ಸಮಸ್ಯೆ ಆಗಿಲ್ಲ ಎಂದು ಜೋಶಿ ಪ್ರಶ್ನಿಸಿದ್ದಾರೆ.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸಂಪೂರ್ಣ ವಿಫಲರಾಗಿದ್ದಾರೆ. ಆರೋಗ್ಯ ಸಚಿವರು ಬರೀ ಮುಖ್ಯಮಂತ್ರಿ ಹಿಂದೆ ಓಡಾಡಿಕೊಂಡಿದ್ದಾರೆ. ಯಾವ ಮಂತ್ರಿಗಳೂ ಸ್ಥಳಕ್ಕೆ ಭೇಟಿ ಕೊಟ್ಟಿಲ್ಲ. ಸ್ಥಳಕ್ಕೆ ಭೇಟಿ ನೀಡಿ ಎಂದು ಸಂಪುಟದಲ್ಲಿ ಸಚಿವರಿಗೆ ಸಿಎಂ ಹೇಳಿದ್ದಾರೆ, ಆದರೂ ಮಂತ್ರಿಗಳು ಇದುವರೆಗೂ ಭೇಟಿ ನೀಡಿಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ.

ನಬಾರ್ಡ್​ ನಿಂದ ರಾಜ್ಯಕ್ಕೆ ಹಣ ಕಮ್ಮಿ ಮಾಡಿಲ್ಲ. ಇಡೀ ದೇಶಕ್ಕೆ ಕಡಿಮೆಯಾಗಿದೆ. ಈ ವಿಚಾರದಲ್ಲಿ ಸಿಎಂ ಸುಳ್ಳು ಹೇಳಿದ್ದಾರೆ. ಬ್ಯಾಂಕ್​ಗಳು ಕೃಷಿ ವಲಯಕ್ಕೆ ಉತ್ತಮವಾಗಿಯೇ ಸಾಲ ಕೊಡುತ್ತಿವೆ. ರಾಷ್ಟ್ರೀಯ ಬ್ಯಾಂಕ್​ಗಳು, ಸಹಕಾರ ಬ್ಯಾಂಕ್​ಗಳು 4% ಬಡ್ಡಿ ದರದಲ್ಲೇ ಸಾಲ ಕೊಡುವುದು. ಆದರೆ ಸಿಎಂ 7% ನಲ್ಲಿ ಸಾಲ ಕೊಡುತ್ತಿವೆ ಅಂತ ಸುಳ್ಳು ಹೇಳಿದ್ದಾರೆ. ಪ್ರಶ್ನೆ ಕೇಳಿದರೆ ಪತ್ರಕರ್ತರಿಗೆ ಸಿಎಂ ಬೆದರಿಸುತ್ತಾರೆ. ಜನರನ್ನು ತಪ್ಪು ದಾರಿಗೆ ಎಳೆಯುತ್ತಾರೆ. ಇವರು ಸುಳ್ಳುಗಾರ ಸಿದ್ದರಾಮಯ್ಯ. ಸುಳ್ಳು ಹೇಳುವುದರಲ್ಲಿ ಇವರಿಗೆ ನೊಬೆಲ್ ಸಿಗಬೇಕು. ಇಂಥಾ ಸುಳ್ಳು ಹೇಳುವ ಸಿಎಂ ಅನ್ನು ರಾಜ್ಯ ಹಿಂದೆ ಕಂಡಿಲ್ಲ ಎಂದು ಕಿಡಿಕಾರಿದ್ದಾರೆ.

ರಾಜ್ಯ ಸರ್ಕಾರದಿಂದ ಮತ್ತಷ್ಟು ಕೋವಿಡ್ ಕೇಸ್ ಹಾಕುವ ವಿಚಾರವಾಗಿ ಮಾತನಾಡಿದ್ದು, ಕಾಂಗ್ರೆಸ್​ನವರಿಗೆ ನೈತಿಕತೆ ಬಗ್ಗೆ ಮಾತನಾಡುವ ಹಕ್ಕಿಲ್ಲ. ರಾಜ್ಯಪಾಲರೇ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟರೂ ನೈತಿಕವಾಗಿ ಅವತ್ತೇ ರಾಜೀನಾಮೆ ಕೊಡಬೇಕಿತ್ತು. ರಾಜ್ಯಪಾಲರಿಗೆ, ಸಂವಿಧಾನ ಹುದ್ದೆಗೆ ಕಾಂಗ್ರೆಸ್ ಅಪಮಾನ ಮಾಡುತ್ತಿದೆ. ರಾಹುಲ್ ಗಾಂಧಿ ತಲೇನೂ ಖಾಲಿ, ಅವರು ಹಿಡಿದ ಸಂವಿಧಾನದ ಪುಸ್ತಕವೂ ಖಾಲಿ ಎಂದು ಹೇಳಿದ್ದಾರೆ.