ಮನೆ ಹವಮಾನ ಡಿ.13 ರಿಂದ ಕರ್ನಾಟಕದ 18ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ

ಡಿ.13 ರಿಂದ ಕರ್ನಾಟಕದ 18ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ

0

ಬಂಗಾಳಕೊಲ್ಲಿ ಹಾಗೂ ಹಿಂದೂಮಹಾಸಾಗರದಲ್ಲಿ ಕಡಿಮೆ ಒತ್ತಡ ಪ್ರದೇಶ ನಿರ್ಮಾಣವಾಗಿದ್ದು, ಚಂಡಮಾರುತ ಪರಿಚಲನೆ ಶುರುವಾಗಿದೆ. ಕರ್ನಾಟಕ, ತಮಿಳುನಾಡು, ಶ್ರೀಲಂಕಾದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Join Our Whatsapp Group

ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ವಿಜಯನಗರ, ಶಿವಮೊಗ್ಗ, ಕೋಲಾರ, ದಾವಣಗೆರೆ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡದಲ್ಲಿ ಸಾಧಾರಣ ಮಳೆಯಾಗಲಿದೆ. ಕ್ಯಾಸಲ್​ರಾಕ್, ಚಿತ್ತಾಪುರ, ಆನವಟ್ಟಿ, ಹುಬ್ಬಳ್ಳಿ, ಸಾಯಿಗಾಂವ್, ಕಲಘಟಗಿ, ಚಿಟಗುಪ್ಪ, ನರಗುಂದ, ಹುಂಚದಕಟ್ಟೆಯಲ್ಲಿ ಮಳೆಯಾಗಿದೆ. ಮೈಸೂರಿನಲ್ಲಿ 17.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರಿನಲ್ಲಿ ಇಂದು ಶುಭ್ರ ಆಕಾಶವಿದೆ, ಎಚ್​ಎಎಲ್​ನಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.