ಮನೆ ಅಪರಾಧ ಕಂದಕಕ್ಕೆ ಉರುಳಿದ ಬಸ್: ಓರ್ವ ಸಾವು, 20ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಕಂದಕಕ್ಕೆ ಉರುಳಿದ ಬಸ್: ಓರ್ವ ಸಾವು, 20ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

0

ಹಿಮಾಚಲ ಪ್ರದೇಶದ ಕುಲುವಿನಲ್ಲಿ ಮಂಗಳವಾರ ಖಾಸಗಿ ಬಸ್ ಕಮರಿಗೆ ಉರುಳಿದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Join Our Whatsapp Group

ಕುಲುವಿನ  ಸ್ಥಳೀಯರು ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದರೆ, ಬಸ್‌ ನ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ಸಮಯದಲ್ಲಿ ಬಸ್‌ ನಲ್ಲಿ ಸುಮಾರು 20 ರಿಂದ 25 ಜನರಿದ್ದರು ಎಂದು ಅವರು ಹೇಳಿದರು.

ಇತರ ಪ್ರಯಾಣಿಕರನ್ನು ಪ್ರಾಥಮಿಕ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ನಮ್ಮ ತಂಡವು ಸ್ಥಳದಲ್ಲಿದೆ ಎಂದು ಕುಲು ಜಿಲ್ಲಾಧಿಕಾರಿ ಎಸ್ ರವೀಶ್ ತಿಳಿಸಿದ್ದಾರೆ. ಸಣ್ಣಪುಟ್ಟ ಗಾಯಗೊಂಡವರನ್ನು ಪ್ರಾಥಮಿಕ ಚಿಕಿತ್ಸೆಯ ನಂತರ ಬಿಡುಗಡೆ ಮಾಡಲಾಗಿದ್ದು, ಗಂಭೀರವಾಗಿ ಗಾಯಗೊಂಡವರನ್ನು ರಾಂಪುರಕ್ಕೆ ಕಳುಹಿಸಲಾಗಿದೆ.

ಕಾರಂತಲ್‌ನಿಂದ ಬರುತ್ತಿದ್ದ ಬಸ್ ಕುಲುವಿನ ಅನ್ನಿಯ ಶ್ವಾದ್-ನಾಗನ್ ರಸ್ತೆಯ ಬಳಿ ಕಮರಿಗೆ ಬಿದ್ದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಸ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಅಪಘಾತದ ದೊಡ್ಡ ಶಬ್ದ ಕೇಳಿ ಸ್ಥಳೀಯರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿವೆ.