ರಾಮನಗರ: ಇಲ್ಲಿನ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಡಿ. 17ರ ಮಂಗಳವಾರ ಉಚಿತ ನೇರ ಸಂದರ್ಶನ ಕಾರ್ಯಕ್ರಮ ಆಯೋಜಿಸಲಾಗಿದೆ.
ನೇರ ಸಂದರ್ಶನ ಕಾರ್ಯಕ್ರಮದಲ್ಲಿ ಖಾಸಗಿ ಸಂಸ್ಥೆಯವರು ಭಾಗವಹಿಸುತ್ತಿದ್ದು, ಉದ್ಯೋಗಾಂಕ್ಷಿಗಳನ್ನು ನೇಮಕ ಮಾಡಿಕೊಳ್ಳಲಿರುವುದರಿಂದ ಖಾಸಗಿ ವಲಯದಲ್ಲಿನ ಉದ್ಯೋಗಕ್ಕೆ ಆಸಕ್ತರಿರುವ ಎಸ್‌ಎಸ್‌ಎಲ್‌ಸಿ, ಐಟಿಐ, ಪಿಯುಸಿ ಅಥವಾ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆ/ರೆಸ್ಯೂಮ್ (ಬಯೋಡೇಟಾ), ಇತ್ಯಾದಿ ದಾಖಲೆಗಳೊಂದಿಗೆ ಡಿ. 17ರ ಮಂಗಳವಾರ ಬೆಳಿಗ್ಗೆ 10.30ಕ್ಕೆ ಜಿಲ್ಲಾ ಕೌಶಲ್ಯ ಕೇಂದ್ರ/ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಕೊಠಡಿ ಸಂಖ್ಯೆ 208, ಮೊದಲನೇ ಮಹಡಿ, ಬಿ.ಎಂ.ರಸ್ತೆ, ಕಂದಾಯ ಭವನ, ರಾಮನಗರ. ಈ ಕಚೇರಿಗೆ ಭೇಟಿ ನೀಡಬಹುದಾಗಿದೆ.
ಹೆಚ್ಚಿನ ಮಾಹಿತಿಗೆ 080-27273364, 9844021496 ಅಥವಾ 9900331779 ಅನ್ನು ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.














