ಬೆಂಗಳೂರು(Bengaluru): ಸಿದ್ದರಾಮಯ್ಯ ಅವರೇ, ಚಡ್ಡಿಗೆ ಬೆಂಕಿ ಹಚ್ಜಿ ನೋಡಿ ನಿಮ್ಮ ಬುಡವೇ ಬೆಂದು ಬೂದಿಯಾಗುತ್ತದೆ. ಆರ್ಎಸ್ಎಸ್ ತಂಟೆಗೆ ಬರಬೇಡಿ ಎಂದು ಬಿಜೆಪಿ ಶಾಸಕ ಕೆ.ಎಸ್.ಈಶ್ವರಪ್ಪ ಕಿಡಿಕಾರಿದ್ದಾರೆ.
ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿರುವ ಗೂಂಡಾಗಳನ್ನು ಬಂಧಿಸದಿದ್ದರೆ ರಾಜ್ಯದಾದ್ಯಂತ ಚಡ್ಡಿ ಸುಡುವ ಪ್ರತಿಭಟನೆ ನಡೆಸುತ್ತೇವೆ’ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಟ್ವೀಟ್ಟರ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾವಣ ಹನುಮನ ಬಾಲಕ್ಕೆ ಬೆಂಕಿ ಹಚ್ಚಿದ… ಲಂಕೆಯೇ ಸುಟ್ಟು ಹೋಯಿತು. ಕಾಂಗ್ರೆಸ್ ಪಕ್ಷವನ್ನು ಚಟ್ಟದಲ್ಲಿಟ್ಟಾಗಿದೆ, ಇನ್ನು ಬೆಂಕಿ ಹಚ್ಚುವುದೊಂದೇ ಕೆಲಸ ಒಂದೇ ಬಾಕಿ ಇದೆ. ಆ ಕೆಲಸ ನಿಮಗಿಂತ ಚೆನ್ನಾಗಿ ಇನ್ಯಾರು ಮಾಡಲು ಸಾಧ್ಯ ಎಂದು ಟ್ವೀಟ್ ಮಾಡಿದ್ದಾರೆ.