ಮನೆ ಅಪರಾಧ ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

0

ಕಲಬುರಗಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕಾರಣದಿಂದ ಇಲ್ಲಿನ ಖರ್ಗೆ ಪೆಟ್ರೋಲ್ ಬಂಕ್ ಸಮೀಪದ ಕಾಫಿಜಾ ಕೆಫೆಗೆ ಶನಿವಾರ (ಡಿ.14) ಬೆಂಕಿ ತಗುಲಿದ್ದು, ಭಾರಿ ಪ್ರಮಾಣದ ನಷ್ಟ ಸಂಭವಿಸಿದೆ.

Join Our Whatsapp Group

 ಬಸವೇಶ್ವರ ಆಸ್ಪತ್ರೆ ಎದುರಿನ ವೃತ್ತದ ಬಳಿಯಿರುವ ಎಸ್.ಆರ್ ಪ್ಲಾಜಾ ಕಟ್ಟಡದ ಮೂರನೇ ಅಂತಸ್ತಿನಲ್ಲಿರುವ ಕಾಫಿಜಾ ಕೆಫೆ ಹೊತ್ತಿ ಉರಿಯಲು ಆರಂಭಿಸುತ್ತಿದ್ದಂತೆಯೇ ಇಡೀ ಕಟ್ಟಡದಲ್ಲಿದ್ದ ಜನರು ತಕ್ಷಣ ಕಟ್ಟಡದಿಂದ ಹೊರಗೆ ಓಡಿ ಬಂದಿದ್ದಾರೆ. ಬೆಂಕಿಯ ಕೆನ್ನಾಲಿಗೆ ಕ್ಷಣಾರ್ಧದಲ್ಲಿ ಇಡೀ ಮೂರನೇ ಅಂತಸ್ತಿಗೆ ಹರಡಿದೆ. ಅಪಾರ ಪ್ರಮಾಣದ ಹಾನಿ ಉಂಟಾಗಿದ್ದು, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಈ ಮಧ್ಯೆ, ಅಗ್ನಿಶಾಮಕ ದಳದ ನೀರು ತುಂಬಿದ್ದ ವಾಹನ ಸ್ಥಳಕ್ಕೆ ಆಗಮಿಸುವಷ್ಟರಲ್ಲಿ ಬೆಂಕಿಯ ಕೆನ್ನಾಲಿಗೆ ಬಹುತೇಕ ಅಂತಸ್ತನ್ನು ಆವರಿಸಿಕೊಂಡಿತ್ತು. ಆದಾಗ್ಯೂ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ಆರಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಎಂ.ಬಿ ನಗರ ಪೊಲೀಸ್ ಠಾಣೆಯಲ್ಲಿ ಘಟನೆ ಕುರಿತು ಪ್ರಕರಣ ದಾಖಲಾಗಿದೆ.