ಮನೆ ಕಾನೂನು ನ್ಯಾಯಾಂಗ ಅಧಿಕಾರಿಗಳ ವರ್ಗಾವಣೆ

ನ್ಯಾಯಾಂಗ ಅಧಿಕಾರಿಗಳ ವರ್ಗಾವಣೆ

0

ಸಾರ್ವಜನಿಕ ಸೇವೆಯ ಹಿತದೃಷ್ಟಿಯಿಂದ ಜಿಲ್ಲಾ ನ್ಯಾಯಾಧೀಶರ ಕೇಡರ್‌ನಲ್ಲಿರುವ ನ್ಯಾಯಾಂಗ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.

Join Our Whatsapp Group

ಬೆಂಗಳೂರು ಕರ್ನಾಟಕ ರಾಜ್ಯ ಸಾರಿಗೆ ಮೇಲ್ಮನವಿ ನ್ಯಾಯಮಂಡಳಿ ಅಧ್ಯಕ್ಷತೆ ವಹಿಸುವ ಅಧಿಕಾರಿ ಎಸ್.ಮಹಾಲಕ್ಷ್ಮಿ ನೇರಳೆ ಅವರನ್ನು  ನ್ಯಾಯ ಮತ್ತು ಮಾನವ ಹಕ್ಕುಗಳು ಕಾನೂನು ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ಬೆಂಗಳೂರು ಕರ್ನಾಟಕ ಮೇಲ್ಮನವಿ ನ್ಯಾಯಮಂಡಳಿ ಸದಸ್ಯ OOD ಜಿಲ್ಲಾ ನ್ಯಾಯಾಧೀಶರಾಗಿರುವ ನಂದಕುಮಾರ್ ಬಿ ಅವರನ್ನು ಕರ್ನಾಟಕ ರಾಜ್ಯ ಸಾರಿಗೆ ಮೇಲ್ಮನವಿ ನ್ಯಾಯಮಂಡಳಿ ಅಧ್ಯಕ್ಷತೆ ವಹಿಸುವ ಅಧಿಕಾರಿಯನ್ನಾಗಿ ನೇಮಿಸಲಾಗಿದೆ.

ಹಾಸನದ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಉಷಾ ರಾಣಿ ಅವರನ್ನು ಮೈಸೂರು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ನೇಮಕ ಮಾಡಲಾಗಿದೆ.

ಬೆಂಗಳೂರು  ಕರ್ನಾಟಕ ಮಧ್ಯಸ್ಥಿಕೆ ಕೇಂದ್ರದ ನಿರ್ದೇಶಕರಾದ ಹೆಚ್ ಆರ್ ರಾಧಾ ಅವರನ್ನು ಬೆಂಗಳೂರಿನ ಕರ್ನಾಟಕ ನ್ಯಾಯಾಂಗ ಅಕಾಡೆಮಿ ನಿರ್ದೇಶಕರಾಗಿ ನೇಮಿಸಲಾಗಿದೆ.

ಬೆಂಗಳೂರು ನಗರ XIII ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಎಸ್ ಗೋಪಾಲಪ್ಪ ಅವರನ್ನು  ಕರ್ನಾಟಕ ಮಧ್ಯಸ್ಥಿಕೆ ಕೇಂದ್ರದ ನಿರ್ದೇಶಕರಾಗಿ ನೇಮಿಸಲಾಗಿದೆ.

ಕರ್ನಾಟಕ ಲೋಕಾಯುಕ್ತದ ಹೆಚ್ಚುವರಿ ರಿಜಿಸ್ಟ್ರಾರ್ (ವಿಚಾರಣೆಗಳು) ಆಗಿರುವ  ಹೇಮಾವತಿ ಅವರನ್ನು ಹಾಸನದ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ನೇಮಿಸಲಾಗಿದೆ.