ಮನೆ ಹವಮಾನ ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

0

ಬೆಂಗಳೂರು: ಒಳನಾಡಿನಲ್ಲಿ ಮುಂದಿನ 3 ದಿನಗಳ ಕಾಲ ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2-4 ಡಿ.ಸೆ. ಏರಿಕೆ ಇರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

Join Our Whatsapp Group

ರಾಜ್ಯಕ್ಕೆ ಚಳಿಗಾಲ ಎಂಟ್ರಿ ಆಗಿದ್ದು, ಆದರೂ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ತಾಪಮಾನ ಏರಿಕೆಯಾಗಿದೆ. ಇನ್ನು ಡಿ.23, 24ರಂದು ರಾಜ್ಯಾದ್ಯಂತ ಒಣಹವೆ ಇರುವ ಸಾಧ್ಯತೆಯಿದೆ. ಒಳನಾಡಿನ ಒಂದೆರಡು ಕಡೆಗಳಲ್ಲಿ ದಟ್ಟ ಮಂಜು ಇರಲಿದೆ. ಡಿ.25ರಂದು ಬೀದರ್‌, ಕಲಬುರಗಿ, ಯಾದಗಿರಿ, ರಾಯಚೂರು, ಬೆಂ.ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಾಮರಾಜನಗರ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಡಿ.26ರಂದು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ ಮತ್ತು ದಕ್ಷಿಣ ಒಳ ಕರ್ನಾಟಕದ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ಆಕಾಶ ಇರುತ್ತದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವದಲ್ಲಿ ದಟ್ಟ ಮಂಜು ಕವಿದ ವಾತಾವರಣ ಇರುವ ಸಾಧ್ಯತೆ ಇದೆ.