ಬೆಂಗಳೂರು (Bengaluru): ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 301 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,53,359ಕ್ಕೆ ಏರಿಕೆಯಾಗಿದೆ.
ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 40066ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
146 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,10,837ಕ್ಕೆ ಏರಿಕೆಯಾಗಿದೆ. ಇನ್ನು 2294 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ 291 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 17,88,895ಕ್ಕೆ ಏರಿಕೆಯಾಗಿದೆ.