ಮುಧೋಳ: ಮರಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿಯಾದ ಪರಿಣಾಮ ಓರ್ವ ಮೃತಪಟ್ಟಿರುವ ಘಟನೆ ಇಂಗಳಗಿ ಸಮೀಪ ನಡೆದಿದೆ.
ಮೃತ ವ್ಯಕ್ತಿಯನ್ನು ಸಾತನಿಂಗಯ್ಯ ಹಿರೇಮಠ (43) ಎಂದು ಗುರುತಿಸಲಾಗಿದೆ.
ವಾಹನ ಚಾಲಕನಿಗೆ ಗಂಭೀರ ಗಾಯವಾಗಿದ್ದು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆಯ ಸಿಬ್ಬಂದಿಯಾಗಿದ್ದ ಇಬ್ಬರೂ ಸಂಘದ ಕೆಲಸದ ನಿಮಿತ್ತ ಹೊರಟಿದ್ದರು ಎಂದು ತಿಳಿದು ಬಂದಿದೆ.














